ಕನ್ನಡಪ್ರಭ ವಾರ್ತೆ ತಿಪಟೂರು
ನಗರಸಭೆ ಮುಂಭಾಗ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಎಸ್‌ಐಆರ್ ರದ್ದುಗೊಳಿಸಬೇಕು. ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರವರನ್ನು ವಜಾ ಗೊಳಿಸಬೇಕು ಹಾಗೂ ಮತದಾರರ ಪಟ್ಟಿಯನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕೋಟಿ ಏಳು ಲಕ್ಷ ಮತದಾರರ ಹೆಸರು ಕಳೆದು ಹೋಗಿದೆ. ಚುನಾವಣೆ ಹತ್ತಿರ ಬಂದಾಗ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಮತದಾನದ ಹಕ್ಕು ಕಸಿಯುವ ಕೆಲಸ ಮಾಡುತ್ತಿವೆ. ಈ ಮೂಲಕ ವಿರೋಧ ಪಕ್ಷಗಳ ಶಕ್ತಿ ಕುಂದಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಆರ್ ಎಸ್ ಚನ್ನಬಸವಯ್ಯ ಮಾತನಾಡಿ ಕೇಂದ್ರ ಸರ್ಕಾರ ಹೊರದೇಶದಿಂದ ಬಂದಿರುವವರ ಮತದ ಹಕ್ಕನ್ನು ವಜಾ ಮಾಡಿದ್ದೇವೆ ಎನ್ನುತ್ತಿದೆ. ಆದರೆ ಕಳೆದ ೧೪ ವರ್ಷದಿಂದ ಕೇಂದ್ರ ಸರ್ಕಾರ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ಗೆಲ್ಲಲು ಆಗುವುದಿಲ್ಲ ಎಂಬ ಕಾರಣಕ್ಕಾಗಿ, ಉದ್ದೇಶ ಪೂರ್ವಕವಾಗಿ ದೇಶದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.ರೈತ ಸಂಘದ ಹಸಿರು ಸೇನೆ ಮುಖಂಡ ತಿಮ್ಲಾಪುರ ದೇವರಾಜು ಮಾತನಾಡಿ, ದೇಶದಲ್ಲಿ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಿತ್ತುಕೊಳ್ಳುತ್ತಿದೆ. ಈ ಬಗ್ಗೆ ಪ್ರತಿಯೊಬ್ಬರು ಪ್ರಶ್ನೆ ಮಾಡಬೇಕು. ಈ ಕೂಡಲೇ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.