ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೊರಬ ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿಗಳು ಕಚೇರಿಯ ಎಲ್ಲ ಸಿಬ್ಬಂದಿ, ಪೌರಕಾರ್ಮಿಕರು ಮತ್ತು ನೀರು ಸರಬರಾಜು ಸಿಬ್ಬಂದಿಗೆ ಮತದಾನದ ಕುರಿತು ಜಾಗೃತಿ ಮೂಡಿಸಿ, ಸಾರ್ವಜನಿಕರಲ್ಲಿ ಮತದಾನ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು.ಆಗುಂಬೆಯಲ್ಲಿ ಮತದಾನ ಜಾಗೃತಿ
ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಗುಂಬೆ ಭಾಗದಲ್ಲಿ ಚುನಾವಣೆ ಪ್ರಕ್ರಿಯೆ, ಮತದಾನದ ಮಹತ್ವ ಮತ್ತು ಜವಾಬ್ದಾರಿ ಕುರಿತು ಕಾರ್ಯಾಗಾರ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಾಗಾರದಲ್ಲಿ ಮತದಾರರಿಗೆ ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ವೇಳೆ ಸೊರಬ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶೈಲಾ ಎನ್, ಪಿಡಿಒ ಲಕ್ಷ್ಮೀ ಇತರರಿದ್ದರು.ಇದೇ ಸಂದರ್ಭ ಎಸ್‍ವಿಎಸ್ ಪ್ರೌಢಶಾಲೆಯಲ್ಲಿ ಭಾರತ ನಕ್ಷೆ ಬಿಡಿಸಿ ಕ್ಯಾಂಡಲ್ ಹಚ್ಚಿ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.
ಅಕ್ರಮ ಮದ್ಯ ವಶ