ಕಾಲೇಜು ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಅಭಿಯಾನ.

KannadaprabhaNewsNetwork |  
Published : Apr 09, 2024, 12:45 AM IST
ಕೆ ಕೆ ಪಿ ಸುದ್ದಿ 03:ನಗರದ ರೂರಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸ್ಮಿತಾರಾಮು ಚಾಲನೆ ನೀಡಿದರು. | Kannada Prabha

ಸಾರಾಂಶ

ಏಪ್ರಿಲ್ 26 ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಅರ್ಹ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತ ಹಾಕುವ ಮೂಲಕ ಸಂವಿಧಾನ ನಮಗೆ ನೀಡಿರುವ ಹಕ್ಕುನ್ನು ಚಲಾಯಿಸಬೇಕೆಂದು ತಹಸೀಲ್ದಾರ್ ಸ್ಮಿತಾರಾಮು ತಿಳಿಸಿದರು.

ಕನಕಪುರ: ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಮ್ಮ ಸಂವಿಧಾನದ ಮೂಲಕ ನಮಗೆ ನೀಡಿರುವ ಮತದಾನದ ಹಕ್ಕನ್ನು ಅರ್ಹ ಪ್ರತಿಯೊಬ್ಬ ವ್ಯಕ್ತಿಯೂ ಚಲಾಯಿಸುವಂತೆ ತಹಸೀಲ್ದಾರ್ ಸ್ಮಿತಾರಾಮು ತಿಳಿಸಿದರು. ನಗರದ ರೂರಲ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಪಂ ಸಹಯೋಗ ದೊಂದಿಗೆ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಏಪ್ರಿಲ್ 26 ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಅರ್ಹ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತ ಹಾಕುವ ಮೂಲಕ ಸಂವಿಧಾನ ನಮಗೆ ನೀಡಿರುವ ಹಕ್ಕುನ್ನು ಚಲಾಯಿಸಬೇಕೆಂದು ತಿಳಿಸಿದರು. ರೂರಲ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರೊ. ಮಂಜುನಾಥ್ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಬೈಕ್ ರ್‍ಯಾಲಿ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು, ತಾಲೂಕು ಪಂಚಾಯಿತಿ ಇ.ಒ.ಮೋಹನ್ ಬಾಬು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಕಾಲೇಜು ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ