ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ವಕೀಲರ ಸಂಘ, ನಗರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾರರ ಜಾಗೃತಿ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ನೂರಕ್ಕೆ ನೂರರಷ್ಟು ಮತದಾನವಾಗಬೇಕಾದರೆ ಅರ್ಹ ಮತದಾರರೆಲ್ಲ ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಶಶಿಧರ ಕುರೇರ ಮಾತನಾಡಿ, ದೇಶದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಬಲಿಷ್ಠ ಪ್ರಜಾಪ್ರಭುತ್ವ ಸದ್ಯದ ಪರಿಸ್ಥಿತಿಯಲ್ಲಿ ಅವಶ್ಯವಾಗಿದೆ. ತಪ್ಪದೇ ಎಲ್ಲರೂ ಮತದಾನ ಮಾಡಬೇಕು. ಬಲಿಷ್ಠ ಪ್ರಜಾಪ್ರಭುತ್ವದ ಬುನಾದಿಗೆ ಪ್ರತಿಯೊಬ್ಬ ನಾಗರಿಕರು ಮತದಾನ ಮಾಡಿದಲ್ಲಿ ಮಾತ್ರ ಸದೃಢ ಸರ್ಕಾರ ನೀಡಲು ಸಾಧ್ಯವಾಗುತ್ತದೆ. ಮತದಾನದ ಹಕ್ಕನ್ನು ಪಡೆದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದರ ಜೊತೆಗೆ ಇತರರನ್ನು ಮತದಾನ ಮಾಡುವಂತೆ ಮನವೊಲಿಸಬೇಕು ಎಂದು ಮನವಿ ಮಾಡಿದರು.ಜಾಗೃತಿ ಜಾಥಾ ಜಿಲ್ಲಾ ನ್ಯಾಯಾಲಯದಿಂದ ಪ್ರಾರಂಭವಾಗಿ ನಗರಸಭೆಗೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಮತದಾನ ಜಾಗೃತಿಯ ಘೋಷಣೆಗಳನ್ನು ಕೂಗಲಾಯಿತು. ಜಾಥಾದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ಮತದಾನ ಜಾಗೃತಿ ಸಂದೇಶವುಳ್ಳ ಟೋಪಿ ಹಾಗೂ ಟೀಶರ್ಟ್ ಧರಿಸಿ ಎಲ್ಲರ ಗಮನ ಸೆಳೆದರು. ನಗರಸಭೆ ಆವರಣದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ನೆರೆದ ಜನರ ಗಮನ ಸೆಳೆಯಲಾಯಿತು.
--
ದೇಶದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಬಲಿಷ್ಠ ಪ್ರಜಾಪ್ರಭುತ್ವ ಸದ್ಯದ ಪರಿಸ್ಥಿತಿಯಲ್ಲಿ ಅವಶ್ಯವಾಗಿದೆ. ತಪ್ಪದೇ ಎಲ್ಲರೂ ಮತದಾನ ಮಾಡಬೇಕು. ಬಲಿಷ್ಠ ಪ್ರಜಾಪ್ರಭುತ್ವದ ಬುನಾದಿಗೆ ಪ್ರತಿಯೊಬ್ಬ ನಾಗರಿಕರು ಮತದಾನ ಮಾಡಿದಲ್ಲಿ ಮಾತ್ರ ಸದೃಢ ಸರ್ಕಾರ ನೀಡಲು ಸಾಧ್ಯವಾಗುತ್ತದೆ.
--
ಮತದಾನ ಮಾಹಿತಿ ನೀಡುವ ಬೈಕ್