ಗಾಂಧಿ ಭವನದಲ್ಲಿ ಮತದಾನ ಪ್ರಾರಂಭ

KannadaprabhaNewsNetwork |  
Published : May 02, 2024, 12:20 AM IST
ಬಳ್ಳಾರಿಯ ಗಾಂಧಿಭವನದಲ್ಲಿ ನಿರ್ಮಿಸಲಾಗಿರುವ ಅಂಚೆಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲಿಸಿದರು.  | Kannada Prabha

ಸಾರಾಂಶ

ಎಡಿಸಿ ಮಹಮ್ಮದ್ ಝುಬೇರ್ ಬುಧವಾರ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು.

ಬಳ್ಳಾರಿ: ಬಳ್ಳಾರಿ ಲೋಕಸಭಾ ಚುನಾವಣೆ ಕರ್ತವ್ಯ ನಿಮಿತ್ತ ಮೇ 7ರ ಮತದಾನ ದಿನದಂದು ಚುನಾವಣೆ ಸಂಬಂಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿ ಅಲ್ಲದೆ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಮೇ 1 ರಿಂದ ಮತ ಚಲಾವಣೆಗೆ ಅವಕಾಶ ಕಲ್ಪಿಸಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿವಿಧ ಅಧಿಕಾರಿ, ಸಿಬ್ಬಂದಿಯಿಂದ ಮತದಾನ ನಡೆಯಿತು.

ಅದೇ ರೀತಿ ಮತದಾನ ದಿನದಂದು ಚುನಾವಣೆ ಸಂಬಂಧಿತ ಅಥವಾ ಇಲಾಖೆಯ ಅನ್ಯ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಮೇ 1ರಿಂದ 6ರವರೆಗೆ ಮತ ಚಲಾಯಿಸಲು ಅನುಕೂಲವಾಗುವಂತೆ ನಗರದ ರೈಲ್ವೆ ನಿಲ್ದಾಣ ಎದುರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಚುನಾವಣೆ ನಿಮಿತ್ಯ ಮೇ 7ರಂದು ಮತದಾನ ನಡೆಯಲಿದ್ದು, ಅಂದು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ವಿವಿಧ ಕ್ಷೇತ್ರಗಳ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಕಲ್ಪಿಸಿದೆ.

ಎಡಿಸಿ ಮಹಮ್ಮದ್ ಝುಬೇರ್ ಬುಧವಾರ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಅದೇ ರೀತಿ ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಗಾಂಧಿ ಭವನದಲ್ಲಿನ ಪೋಸ್ಟಲ್ ವೋಟಿಂಗ್ ಸೆಂಟರ್ ಹಾಗೂ ಫೆಸಿಲಿಟೇಶನ್ ಸೆಂಟರ್‌ಗೆ ಆಗಮಿಸಿ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ