ಮತದಾನದಿಂದ ಸಮೃದ್ಧ ನಾಡು ಕಟ್ಟಲು ಸಾಧ್ಯ: ಎನ್. ಹನುಮರಡ್ಡಿ

KannadaprabhaNewsNetwork |  
Published : Jan 26, 2026, 04:00 AM IST
ಪೋಟೊ-೨೩ ಎಸ್.ಎಚ್.ಟಿ. ೨ಕೆ- ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. | Kannada Prabha

ಸಾರಾಂಶ

ಜನತಂತ್ರ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮಾತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು.

ಶಿರಹಟ್ಟಿ: ಮತದಾನ ಸಾರ್ವಜನಿಕರಿಗೆ ಸಂವಿಧಾನ ನೀಡಿದ ಮಹತ್ವದ ಅಧಿಕಾರ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಸಮೃದ್ಧ ಕನಸಿನ ನಾಡು ಕಟ್ಟಬೇಕು ಎಂದು ಪಟ್ಟಣದ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕ ಎನ್. ಹನುಮರಡ್ಡಿ ತಿಳಿಸಿದರು.ಎಫ್.ಎಂ. ಡಬಾಲಿ ಕಾಲೇಜಿನಲ್ಲಿ ಏರ್ಪಡಿಸಿದ್ದ ೧೬ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನತಂತ್ರ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮಾತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ನನ್ನ ಭಾರತ ನನ್ನ ಮತ ಎನ್ನುವ ಧ್ಯೇಯವಾಕ್ಯದೊಂದಿಗೆ ೨೦೨೬ರ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಜ. ೨೫ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದ್ದು, ಯುವ ಜನಾಂಗಕ್ಕೆ ಮತದಾನದ ಮಹತ್ವವನ್ನು ಕುರಿತು ತಿಳಿವಳಿಕೆ ನೀಡಿದರು.ಚುನಾವಣೆಗಳಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ. ಎಲ್ಲರೂ ಕಡ್ಡಾಯವಾಗಿ ಪವಿತ್ರವಾದ ಮತದಾನ ಚಲಾಯಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಪ್ರಜಾಸತಾತ್ಮಕ ಮೌಲ್ಯಗಳನ್ನು ಬೇರುಮಟ್ಟದಲ್ಲಿ ಸ್ವೀಕರಿಸಿ ಜೀವನದಲ್ಲಿ ಚಾಚು ತಪ್ಪದೇ ಅಳವಡಿಸಿಕೊಳ್ಳಬೇಕು. ಯುವಕರು ಕಡ್ಡಾಯವಾಗಿ ಮತದಾರರ ನೋಂದಣಿ ಪಟ್ಟಿಗೆ ಸೇರ್ಪಡೆಯಾಗಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು. ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸಲು ಪ್ರತಿಯೊಂದು ಮತವೂ ಅಮೂಲ್ಯವಾದದ್ದು. ಆ ಮತದ ಬಗ್ಗೆ ಜಾಗೃತರಾಗಬೇಕು ಎಂದರು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಧಾ ಹುಚ್ಚಣ್ಣವರ ಮಾತನಾಡಿ, ಗುಣಾತ್ಮಕ ಮತ್ತು ಪಾರದರ್ಶಕ ಮತದಾನ ಜರುಗಲು ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕು. ಆಸೆ, ಆಮಿಷಗಳಿಗೆ ಬಲಿಯಾಗದೇ ದೇಶದ ಭವಿಷ್ಯ ನಿರ್ಧರಿಸುವ ಶಕ್ತಿ ನಿಮ್ಮ ಕೈಯಲ್ಲೇ ಇದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರೂ ಸರಿಯಾದ ವ್ಯಕ್ತಿಗೆ ಮತ ನೀಡಬೇಕು ಎಂದರು.ಧರ್ಮ, ಜಾತಿ, ಪ್ರೇರಣೆಗೆ ಬಲಿಯಾಗದೇ ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ೧೮ ವರ್ಷ ಮೇಲ್ಪಟ್ಟವರು ಮತದಾರ ಪಟ್ಟಿಯಿಂದ ಹೊರಗುಳಿಯದೇ ಎಲ್ಲರೂ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಕಡ್ಡಾಯವಾಗಿ ಮತ ಚಲಾವಣೆಗೆ ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವೈ.ಎಸ್. ಪಂಗಣ್ಣವರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರಾದ ಪಿ.ಎನ್. ಕುಲಕರ್ಣಿ, ಎಂ.ಎಂ. ನದಾಫ್, ಎಫ್.ಎ. ಬಾಬುಖಾನವರ, ಪಿ.ವಿ. ಹೊಸೂರ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ