ಚಿತ್ರದುರ್ಗ: ಲೋಕಸಭೆಗೆ ಚಿತ್ರದುರ್ಗ ಕ್ಷೇತ್ರದಿಂದ ನಡೆಯುವ 18ನೇ ಚುನಾವಣೆಗೆ ಕೋಟೆನಾಡು ಸಜ್ಜಾಗಿದೆ. ಕಳೆದ ಮೂರು ದಶಕಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪ್ರಖರ ಬೇಸಿಗೆಯಲ್ಲಿ ಅದೂ 38ರಿಂದ 40 ಡಿಗ್ರಿ ಸೆಲ್ಸಿಯಸ್‌ನ ಸೂರ್ಯನ ತಾಪದ ನಡುವೆ ಮತದಾನ ಮಾಡಬೇಕಾದ ಅನಿವಾರ್ಯತೆ ಜನತೆ ಎದುರಿಸುವಂತಾಗಿದೆ. ಏ.26 ಶುಕ್ರವಾರ ಮತದಾನ ನಡೆಯಲಿದೆ.
54 ವಿಶೇಷ ಮತಗಟ್ಟೆಗಳ ಸ್ಥಾಪನೆ
ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರನ್ನು ಆಕರ್ಷಿಸಲು 54 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮಹಿಳಾ ಮತದಾರರನ್ನು ಉತ್ತೇಜಿಸಲು ಪ್ರತಿ ವಿಧಾನಸಭಾವಾರು ಮಹಿಳಾ ಮತದಾರರು ಹೆಚ್ಚಿರುವ 5 ಕಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿ ಚುನಾವಣಾ ಕಾರ್ಯನಿರ್ವಹಿಸಲಿದ್ದಾರೆ. ಇದೇ ಮಾದರಿಯಲ್ಲಿ ಪ್ರತಿ ವಿಧಾನ ಸಭಾವಾರು 6 ವಿಶೇಷ ಚೇತನ, ಯುವ, ವಿಷಯಾಧಾರಿತ ಹಾಗೂ ಸ್ಥಳೀಯ ಇತಿಹಾಸ ಪರಂಪರೆ, ಸಂಸ್ಕೃತಿಯನ್ನು ಮತಗಟ್ಟೆಗಳು ಬಿಂಬಿಸಲಿವೆ. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಬಿಸಿಲಾಘಾತ ಹಾಗೂ ಕೋವಿಡ್ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮತಗಟ್ಟೆಗಳಲ್ಲಿ ತೆಂಗಿನ ಚಪ್ಪರ ಹಾಗೂ ಶಾಮೀಯಾನ ಹಾಕಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.3300 ಪೊಲೀಸರ ನೇಮಕ
ಸರ್ಕಾರಿ ವಿಜ್ಞಾನ ಕೇಂದ್ರದಲ್ಲಿ ಮತ ಎಣಿಕೆ
ಮತದಾನ ನಂತರ ಡಿ.ಮಸ್ಟರಿಂಗ್ ಕೇಂದ್ರಗಳಲ್ಲಿ ಮತದಾನ ಯಂತ್ರಗಳನ್ನು ಸಂಗ್ರಹಿಸಿ ಭದ್ರಪಡಿಸಿ, ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‍ರೂಮ್‍ಗೆ ಕಳುಹಿಸಿಕೊಡಲಾಗುತ್ತದೆ. ಜೂ.4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಟಿ.ವೆಂಕಟೇಶ್ ಗುರುವಾರ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನ ಮಸ್ಟರಿಂಗ್ ಹಾಗೂ ಡಿ.ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಮತಗಟ್ಟೆ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಿದರು. ಮತದಾನಕ್ಕೆ ಮುನ್ನ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಸೂಚನೆ ನೀಡಿದರು.ಚುನಾವಣೆ ಆಯೋಗ ಕೈಪಿಡಿಯಲ್ಲಿನ ಚೆಕ್ ಲೀಸ್ಟ್ ನಂತೆಯೇ ಮತಗಟ್ಟೆಗಳಿಗೆ ತೆರಳುವ ಅಧಿಕಾರಿ ಹಾಗೂ ಸಿಬ್ಬಂದಿಗೆ ವಿದ್ಯುನ್ಮಾನ ಮತಯಂತ್ರ, ಮತದಾರ ಪಟ್ಟಿ, ಶಾಸನ ಬದ್ದ ಪುಸ್ತಕಗಳು, ಸ್ಪರ್ಧಿಸುತ್ತಿರುವ ಉಮೇದುವಾರರ ಪಟ್ಟಿ, ದಿನಚರಿ, ವರದಿ, ನಮೂನೆ, ಶಾಹಿ, ಕಂಪಾರ್ಟ್ಮೆಂಟ್ ಸೇರಿದಂತೆ ಇತರೆ ಸ್ಟೇಷನರಿ ಕಿಟ್‌ಗಳನ್ನು ಚೆಕ್‌ಲಿಸ್ಟ್ ಕ್ರಮದಲ್ಲಿ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.