ಜಿಲ್ಲೆಯ 5 ತಾಲೂಕುಗಳ 9 ಮತಗಟ್ಟೆಗಳಲ್ಲಿ ಮತದಾನ

KannadaprabhaNewsNetwork |  
Published : Oct 22, 2026, 01:15 AM IST
ಯಾದಗಿರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ, ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗದ್ಗುರು ಶ್ರೀಮದ್ ಮಧ್ವಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಅಕ್ಟೋಬರ್ 23ರಂದು ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ಜಿಲ್ಲೆಯ 5 ತಾಲೂಕುಗಳಲ್ಲಿ ಒಟ್ಟು 9 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು, 3,193 ಶಿಕ್ಷಕರು ಮತದಾನ ಮಾಡಲಿದ್ದಾರೆ

ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಅಕ್ಟೋಬರ್ 23ರಂದು ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ಜಿಲ್ಲೆಯ 5 ತಾಲೂಕುಗಳಲ್ಲಿ ಒಟ್ಟು 9 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು, 3,193 ಶಿಕ್ಷಕರು ಮತದಾನ ಮಾಡಲಿದ್ದಾರೆ.

ಅ.23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ಜರುಗಲಿದ್ದು, ಮತದಾನಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಅ. 27ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ 5 ತಾಲೂಕುಗಳಿಂದ ಒಟ್ಟಾರೆ 3,193 ಮತದಾರರಿದ್ದಾರೆ. ಇದರಲ್ಲಿ 1,688 ಪುರುಷ ಹಾಗೂ 1,505 ಮಹಿಳಾ ಮತದಾರರು ಸೇರಿದ್ದಾರೆ.

ಮಾಗಡಿ ತಾಲೂಕಿನಲ್ಲಿ 346 ಪುರುಷ ಹಾಗೂ 209 ಮಹಿಳಾ ಮತದಾರರು ಸೇರಿ ಒಟ್ಟಾರೆ 555 ಮತದಾರರಿದ್ದಾರೆ. ರಾಮನಗರ ತಾಲೂಕಿನಲ್ಲಿ 400 ಪುರುಷ ಹಾಗೂ 433 ಮಹಿಳಾ ಮತದಾರರು ಸೇರಿ ಒಟ್ಟಾರೆ 833 ಮತದಾರರಿದ್ದಾರೆ. ಚನ್ನಪಟ್ಟಣ ತಾಲೂಕಿನಲ್ಲಿ 465 ಪುರುಷ ಹಾಗೂ 461 ಮಹಿಳಾ ಮತದಾರರು ಸೇರಿ ಒಟ್ಟಾರೆ 926 ಮತದಾರರಿದ್ದಾರೆ. ಹಾರೋಹಳ್ಳಿ ತಾೂಕಿನಲ್ಲಿ 101 ಪುರುಷ ಹಾಗೂ 99 ಮಹಿಳಾ ಮತದಾರರು ಸೇರಿ ಒಟ್ಟಾರೆ 200 ಮತದಾರರಿದ್ದಾರೆ. ಕನಕಪುರ ತಾಲೂಕಿನಲ್ಲಿ 376 ಪುರುಷ ಹಾಗೂ 303 ಮಹಿಳಾ ಮತದಾರರು ಸೇರಿ ಒಟ್ಟಾರೆ 679 ಮತದಾರರಿದ್ದಾರೆ.

ಒಂದು ದಿನ ವಿಶೇಷ ಸಾಂದರ್ಭಿಕ ರಜೆ:

ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈ ವಾರ್ಷಿಕ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ಅ.23ರಂದು ನಡೆಯುವ ಮತದಾನದಲ್ಲಿ ಆಯಾ ಮತ ಕ್ಷೇತ್ರಗಳಲ್ಲಿನ ಅರ್ಹ ಪದವೀಧರ/ಶಿಕ್ಷಕ ಮತದಾರರಿಗೆ ಮಾತ್ರ ಮತ ಚಲಾಯಿಸಲು ಅನುಕೂಲವಾಗುವಂತೆ ಅ. 23ರಂದು ಮತದಾರರು ರಜೆಯನ್ನು ಮಂಜೂರು ಮಾಡಲಾಗಿದೆ. ಪ್ರಾಧಿಕಾರಿಗಳಿಂದ ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೊಳಪಟ್ಟು ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಬಾಕ್ಸ್ ...

ಪರ್ಯಾಯ ದಾಖಲೆ ತಂದು ಮತ ಚಲಾಯಿಸಿ :

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನದ ವೇಳೆ ಮತದಾರರ ಗುರುತಿನ ಚೀಟಿ ಲಭ್ಯವಿಲ್ಲದಿದ್ದಲ್ಲಿ ಮತದಾನಕ್ಕೆ ಪರ್ಯಾಯವಾಗಿ ಬಳಸಬಹುದಾದ ಅಧಿಕೃತ ದಾಖಲೆಗಳ ಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ.

ಮತದಾರರು ಮತಗಟ್ಟೆಗೆ ಬಂದಾಗ ತಮ್ಮ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಹಕ್ಕು ಚಲಾಯಿಸುವುದು ಕಡ್ಡಾಯವಾಗಿದೆ. ಆದರೆ, ಒಂದು ವೇಳೆ ಯಾವುದೇ ಮತದಾರರ ಬಳಿ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಮತದಾನದಿಂದ ವಂಚಿತರಾಗುವುದನ್ನು ತಪ್ಪಿಸಲು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಲು ಅವಕಾಶನೀಡಲಾಗಿದೆ.

ಪರ್ಯಾಯ ಗುರುತಿನ ದಾಖಲೆಗಳ ವಿವರ:

ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಸೇವಾ ಗುರುತಿನ ಚೀಟಿಗಳಾದ ಕೇಂದ್ರ ಅಥವಾ ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆಗಳು, ಸ್ಥಳೀಯ ಸಂಸ್ಥೆಗಳು ಅಥವಾ ಖಾಸಗಿ ಕೈಗಾರಿಕಾ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಅಧಿಕೃತ ಸೇವಾ ಗುರುತಿನ ಚೀಟಿ.

ಅದೇ ರೀತಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ. ಶಿಕ್ಷಕರ ಅಥವಾ ಪದವೀಧರರ ಕ್ಷೇತ್ರದ ಮತದಾರರು ಕರ್ತವ್ಯ ನಿರ್ವಹಿಸುತ್ತಿರುವ ಸಂಬಂಧಿತ ಶಿಕ್ಷಣ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿ. ವಿಶ್ವವಿದ್ಯಾಲಯ ನೀಡಿರುವ ಮೂಲ ಪದವಿ ಅಥವಾ ಡಿಪ್ಲೊಮಾ ಪ್ರಮಾಣಪತ್ರ.

ಇದಲ್ಲದೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅಥವಾ ಸಕ್ಷಮ ಪ್ರಾಧಿಕಾರವು ನೀಡಿರುವ ವಿಶಿಷ್ಟ ಅಂಗವಿಕಲತಾ ಗುರುತಿನ ಚೀಟಿ (ಯುಡಿಐಡಿ ಕಾರ್ಡ್).

ಅರ್ಹ ಮತದಾರರು ಈ ಎಲ್ಲಾ ಪರ್ಯಾಯ ದಾಖಲೆಗಳನ್ನು ಸದ್ಬಳಕೆ ಮಾಡಿಕೊಂಡು ಯಾವುದೇ ಗೊಂದಲವಿಲ್ಲದೆ ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸುವಂತೆ ಚುನಾವಣಾ ಆಯೋಗ ಪ್ರಕಟಣೆ ತಿಳಿಸಿದೆ.

ಬಾಕ್ಸ್‌..........

ಮತಗಟ್ಟೆ ಕೇಂದ್ರಗಳ ವಿವರ:

ಮಾಗಡಿ ತಾಲೂಕು:

1.ಭಾಗ ಸಂಖ್ಯೆ – 47: ಕೋರ್ಟ್ ಹಾಲ್, ತಾಲೂಕು ಕಚೇರಿ ಮಾಗಡಿ.

2.ಭಾಗ ಸಂಖ್ಯೆ – 48: ಗ್ರಾಮ ಪಂಚಾಯತ್ ಕಚೇರಿ, ಕುದೂರು ಗ್ರಾಮ, ಕುದೂರು ಹೋಬಳಿ, ಮಾಗಡಿ ತಾಲೂಕು.

ರಾಮನಗರ ತಾಲೂಕು:

3.ಭಾಗ ಸಂಖ್ಯೆ – 49: ಕೊಠಡಿ ಸಂಖ್ಯೆ-01, ತಹಸೀಲ್ದಾರರ ಕಚೇರಿ, ತಾಲೂಕು ಆಡಳಿತ ಸೌಧ ರಾಮನಗರ.

4.ಭಾಗ ಸಂಖ್ಯೆ – 50: ಕೊಠಡಿ ಸಂಖ್ಯೆ-02, ತಹಸೀಲ್ದಾರರ ಕಚೇರಿ, ತಾಲೂಕು ಆಡಳಿತ ಸೌಧ, ರಾಮನಗರ.

ಚನ್ನಪಟ್ಟಣ ತಾಲೂಕು:

5.ಭಾಗ ಸಂಖ್ಯೆ – 51: ಕೊಠಡಿ ಸಂಖ್ಯೆ-01, ತಹಸೀಲ್ದಾರರ ಕಚೇರಿ, ತಾಲ್ಲೂಕು ಆಡಳಿತ ಸೌಧ, ಚನ್ನಪಟ್ಟಣ.

6.ಭಾಗ ಸಂಖ್ಯೆ – 52: ಕೋಡಂಬಳ್ಳಿ ನಾಡಕಚೇರಿ, ಕೋಡಂಬಳ್ಳಿ ಗ್ರಾಮ, ಚನ್ನಪಟ್ಟಣ ತಾಲೂಕು.

ಹಾರೋಹಳ್ಳಿ :

7.ಭಾಗ ಸಂಖ್ಯೆ – 53: ಕೆಪಿಎಸ್ ಜಿಎಚ್‌ಪಿಎಸ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಾರೋಹಳ್ಳಿ ತಾಲೂಕು.

ಕನಕಪುರ ತಾಲೂಕು:

8.ಭಾಗ ಸಂಖ್ಯೆ- 54: ಕೊಠಡಿ ಸಂಖ್ಯೆ-101, ತಹಸೀಲ್ದಾರರ ಕಚೇರಿ, ತಾಲೂಕು ಆಡಳಿತ ಸೌಧ, ಕನಕಪುರ ತಾಲೂಕು.

9.ಭಾಗ ಸಂಖ್ಯೆ – 55: ಕೊಠಡಿ ಸಂಖ್ಯೆ-113, ತಹಸೀಲ್ದಾರರ ಕಚೇರಿ, ತಾಲೂಕು ಆಡಳಿತ ಸೌಧ, ಕನಕಪುರ ತಾಲೂಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭ್ಯರ್ಥಿ ಶಶೀಲ್‌ ನಮೋಶಿಗೆ ಅಭೂತಪೂರ್ವ ಬೆಂಬಲ: ರವೀಂದ್ರ ಶೆಟ್ಟಿ
ಶ್ರದ್ದಾ ಭಕ್ತಿಯಿಂದ ದೇವರನ್ನು ಆರಾಧಿಸಿದರೆ ಯಶಸ್ಸು ಸಿದ್ದಿ