ಧಾರವಾಡ:
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ವಾಕಾಥಾನ್ ಹಾಗೂ ಕಲಾ ತಂಡಗಳ ಜಾಥಾ ಕಾರ್ಯಕ್ರಮಕ್ಕೆ ವಾದ್ಯ ಬಾರಿಸುವ ಮೂಲಕ ಚಾಲನೆ ನೀಡಿದ ಅವರು, ಮತದಾನ ಹೆಚ್ಚಿಸುವಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಪ್ರತಿ ಮತದಾರನಿಗೆ ಮತದಾನದ ಮಹತ್ವ ತಿಳಿಸಿ, ಅರಿವು ಮೂಡಿಸಿ ತಪ್ಪದೇ ಮತದಾನ ಮಾಡುವಂತೆ ಮಾಡುವುದು ಮತ್ತು ಪ್ರತಿ ಅರ್ಹ ಮತದಾರನು ಮತದಾರ ಪಟ್ಟಿಯಲ್ಲಿ ತಪ್ಪದೇ ತನ್ನ ಹೆಸರು ಸೇರ್ಪಡೆ ಆಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಲು ತಿಳಿಸುವದಾಗಿದೆ ಎಂದರು.
ಪಟ್ಟಿಯಲ್ಲಿ ಸೇರಲು ಅವಕಾಶ:ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ರದ್ದುಪಡಿಸುವುದು ಸೇರಿದಂತೆ ಎಲ್ಲ ಕಾರ್ಯಗಳು ವರ್ಷ ಪೂರ್ತಿ ನಿರಂತರವಾಗಿ ನಡೆಯುತ್ತಿರುತ್ತವೆ. ಮೇ 7ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶಕ್ಕಾಗಿ ಮತದಾರಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ನಮೂನೆ 6ನ್ನು ಸಲ್ಲಿಸಲು ಏ. 9ರ ವರೆಗೆ ಅವಕಾಶವಿದೆ ಎಂದ ಅವರು, ಅಗತ್ಯ ದಾಖಲೆಗಳೊಂದಿಗೆ ಅರ್ಹತೆ ಇದ್ದು ಮತದಾರ ಪಟ್ಟಿಗೆ ಹೆಸರು ಸೆರ್ಪಡೆ ಮಾಡಿಕೊಳ್ಳಬಹುದು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳು ಆಗಿರುವ ಜಿಪಂ ಸಿಇಒ ಸ್ವರೂಪ ಟಿ.ಕೆ., ಮಾತನಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾದ ವಾಕಾಥಾನ್ ಮತ್ತು ಕಲಾ ತಂಡಗಳ ಜಾಥಾವು ಉಳವಿ ಚನ್ನಬಸವೇಶ್ವರ ವೃತ್ತ, ಕೋರ್ಟ್ ಸರ್ಕಲ್, ಆಲೂರು ವೆಂಕಟರಾವ್ ವೃತ್ತಕ್ಕೆ ಬಂದು ತಲುಪಿತು. ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಯೋಜನಾಧಿಕಾರಿ ದೀಪಕ ಮಡಿವಾಳರ, ಡಿಎಚ್‌ಒ ಡಾ. ಶಶಿ ಪಾಟೀಲ, ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು. 27ಡಿಡಬ್ಲೂಡಿ4