ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಹೇಳಿದರು.
ಮತದಾನಕ್ಕಿಂತ ಇನ್ನೊಂದಿಲ್ಲ-ಧ್ಯೇಯ:
ಜಿಪಂ ಸಿಇಒ ಡಾ.ಅನುರಾಧ ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಬೇಕು. ಮತದಾನ ಮಾಡಬೇಕು. ಈ ವರ್ಷ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿ ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದರು.ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ.85ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ವೇದಿಕೆ ಕಾರ್ಯಕ್ರಮ ನಂತರ ಜಿಲ್ಲಾಡಳಿತ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಮತದಾರರ ಜಾಗೃತಿ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.25ಕೆಡಿಬಿಪಿ1- ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ನಡೆದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.