ದೇಶದ ಭವಿಷ್ಯಕ್ಕೆ ಮತಪರಿಷ್ಕರಣೆ ಮಹತ್ವದ ನಿರ್ಧಾರ

KannadaprabhaNewsNetwork |  
Published : Nov 18, 2025, 02:15 AM IST
ಜಾರಕಿಹೊಳಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಗೋಕಾಕ ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರವಾಗಿದ್ದು, ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಾರ್ಟಿಯ ಗೋಕಾಕ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಬಿ.ಎಲ್ ಎ -2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರವಾಗಿದ್ದು, ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

ನಗರದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಾರ್ಟಿಯ ಗೋಕಾಕ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಬಿ.ಎಲ್ ಎ -2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಸಮ್ಮತವಾದ ಚುನಾವಣೆಗೆ ಪ್ರಾಮಾಣಿಕ ಮತಪಟ್ಟಿ ಅತ್ಯಅವಶ್ಯಕವಾಗಿದೆ. ಅರ್ಹ ನಾಗರಿಕರು ಮತದಾನದಿಂದ ವಂಚಿತರಾಗಬಾರದು, 23 ವರ್ಷಗಳ ನಂತರ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಚುನಾವಣಾ ಆಯೋಗವು ಸ್ವತಂತ್ರವಾದ ಸಂಸ್ಥೆಯಾಗಿದ್ದು, ಅದು ಸಂವಿಧಾನ ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆ. ಬೋಗಸ್‌ ಮತಗಳನ್ನು ತೆಗೆಯುವುದಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಖೊಟ್ಟಿ ಮತದಾನ ಮಾಡುವುರಿಂದ ದೇಶವನ್ನು ಮುಕ್ತ ಗೊಳಿಸಿ ಅರ್ಹ ನಾಗರಿಕರಿಗೆ ಮತದಾನ ಮತದಾನ ಮಾಡಲು ಅವಕಾಶ ಕಲ್ಪಿಸಿಬೇಕು. ಈ ಮಹತ್ತರವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು. ನಿಜವಾದ ಭಾರತೀಯ ಮತದಾರರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸುವಂತೆ ಕರೆ ನೀಡಿದರು.ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ, ಗೋಕಾಕ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸಕ್ರಿಯವಾಗಿ ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತಾರೆ. ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರಿಗೆ ರಾಜಕೀಯವಾಗಿ ಕಾಂಗ್ರೆಸ್ ಪಕ್ಷ ಹಿನ್ನಡೆ ಮಾಡಿದೆ. ಅಲ್ಲದೇ, ಮತಗಳ್ಳತನ ಮಾಡಿ ಚುನಾವಣೆಯಲ್ಲಿ ಪರಾಭವಗೊಳಿಸಿ ಇಂದು ಮತಗಳ್ಳತನದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡುತ್ತಿದ್ದಾರೆ. ದೇಶದಲ್ಲಿ ಹಿಂದೂ- ಮುಸ್ಲಿಂ ಬಾಂಧವರು ಅಣ್ಣ ತಮ್ಮಂದಿರಂತೆ ಇರಬೇಕು ಎಂಬುವುದೇ ಬಿಜೆಪಿ ಪಕ್ಷದ ಉದ್ದೇಶವಾಗಿದೆ. ಮುಸ್ಲಿಂ ಬಾಂಧವರು ಬಿಜೆಪಿಯನ್ನು ಬೆಂಬಲಿಸಿ, ನಾವೆಲ್ಲ ಭಾರತೀಯರು ಒಂದೇ ಎಂಬ ಧ್ಯೇಯವಾಕ್ಯದಡಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಪ್ರವೃತ್ತರಾಗಿದ್ದು, ಅವರ ಕಾರ್ಯವನ್ನು ನಾವೆಲ್ಲರೂ ಬೆಂಬಲಿಸೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ್, ರಾಷ್ಟ್ರೀಯ ಓಬಿಸಿ ಮೋರ್ಚಾದ ಲಕ್ಷ್ಮಣ ತಪಸಿ, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾದ ಶಕೀಲ್ ಧಾರವಾಡಕರ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ, ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮನ್ನವರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಎಲ್.ಎಸ್.ಕೋಲಕಾರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಒಡೆಯರ, ಬಿ.ಎಲ್.ಎ ಪ್ರಮುಖ ಮಾಣಿಕ ಈರಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಆನಂದ ಹತ್ತುಗೋಳ ಸೇರಿದಂತೆ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ