ಕನ್ನಡಪ್ರಭ ವಾರ್ತೆ ತಿಕೋಟಾ
ತಾಲೂಕು ಸ್ವೀಪ್ ಸಮಿತಿ ಹಾಗೂ ತಾಪಂ ತಿಕೋಟಾ ವತಿಯಿಂದ ತಿಕೋಟಾ ಪಟ್ಟಣದಲ್ಲಿ ಮತದಾನ ಜಾಗೃತಿ ಅಂಗವಾಗಿ ಹಮ್ಮಿಕೊಂಡ ಬೈಕ್ ರ್‍ಯಾಲಿ ಮತ್ತು ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಮತದಾನ ಎನ್ನುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದೆ. ಅಂದರೆ ಎಲ್ಲ ಭಾರತೀಯರು ತಮ್ಮ ಆಯ್ಕೆಯ ಸಂಸದರನ್ನು ಆಯ್ಕೆ ಮಾಡಲು ಮತವನ್ನು ಚಲಾಯಿಸಬೇಕು. ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಪ್ರಮುಖ ನಾಗರಿಕ ಕರ್ತವ್ಯವಾಗಿದೆ. ಮತದಾನವು ರಾಜಕಾರಣಿಗಳನ್ನು ಅವರ ಕಾರ್ಯಗಳಿಗೆ ಜವಾಬ್ದಾರರಾಗಿರಲು ಸಹಾಯ ಮಾಡುತ್ತದೆ ಮತ್ತು ನಮ್ಮ ಪ್ರಜಾಪ್ರಭುತ್ವದ ಚೌಕಟ್ಟನ್ನು ಸೃಷ್ಟಿಸುತ್ತದೆ ಎಂದರು.ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್‌ಕುಮಾರ ಭಾವಿದೊಡ್ಡಿ, ತಿಕೋಟಾ ತಹಸೀಲ್ದಾರ್ ಸುರೇಶ ಮುಂಜೆ, ತಾಪಂ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳೀನ, ತಿಕೋಟಾ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಸವರಾಜ ಉಳ್ಳಾಗಡ್ಡಿ ಇತರರು ಇದ್ದರು.
---ಕೋಟ್‌ಮತದಾನ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಎಲ್ಲ ಮತದಾರರು ಸಿದ್ಧವಾಗಬೇಕು. ಈಗಾಗಲೇ ಮತದಾನಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು.-ಪ್ರವೀಣ ಸಾಲಿ, ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ