ನಾಳೆಯಿಂದ ವಿಟಿಯು ಅಥ್ಲೆಟಿಕ್ಸ್ ಕ್ರೀಡಾಕೂಟ

KannadaprabhaNewsNetwork |  
Published : Mar 14, 2025, 01:30 AM IST
ಪೋಟೋ: 13ಎಸ್‌ಎಂಜಿಕೆಪಿ01ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಹಯೋಗದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟ 'ಸದೃಢ-2.0' ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ತಿಳಿಸಿದರು.

ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಹಯೋಗದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟ ''ಸದೃಢ-2.0'' ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.15 ರಂದು ಬೆಳಗ್ಗೆ 9 ರವರೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ, ವಿಟಿಯು ಕುಲಪತಿ ಡಾ.ವಿದ್ಯಾಶಂಕರ್‌ ಉದ್ಘಾಟಿಸಲಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತ ಎಸ್.ಡಿ.ಈಶನ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಅಧ್ಯಕ್ಷತೆ ವಹಿಸಲಿದ್ದು, ವಿಟಿಯು ಕುಲಸಚಿವ ಡಾ.ಬಿ.ಇ.ರಂಗಸ್ವಾಮಿ, ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್‌.ಶ್ರೀನಿವಾಸ, ಹಣಕಾಸು ಅಧಿಕಾರಿ ಡಾ.ಪ್ರಶಾಂತ್‌ ನಾಯಕ್‌, ಎನ್‌ಇಎಸ್‌ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್‌, ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್‌, ವಿಟಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ವಿ.ಕಡಗದಕೈ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎ.ವಿ.ಚೇತನ್ ಉಪಸ್ಥಿತರಿರುವರು. ಇದೇ ವೇಳೆ ಸದೃಢ-2.0 ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಮಾ.18 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪದಲ್ಲಿ ವಿಟಿಯು ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್‌.ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ ಎಂದರು.

ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಮಾತನಾಡಿ, ರಾಜ್ಯದ ವಿವಿಧ 150 ಎಂಜಿನಿಯರಿಂಗ್‌ ಕಾಲೇಜುಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳ ಈ ಕ್ರೀಡಾಕೂಟದಲ್ಲಿ ಸುಮಾರು 44 ವಿವಿಧ ಅಥ್ಲೆಟಿಕ್ಸ್‌ ಕ್ರೀಡೆಗಳು ನಡೆಯಲಿದೆ. ಇಡಿಎಂ ಸಾಫ್ಟವೇರ್‌ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಕಾಲೇಜಿನಲ್ಲಿಯೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್ಇಎಸ್ ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ