ಕುಷ್ಟಗಿ:
ಪ್ರತಿಭಟನೆಯು ಪಟ್ಟಣದ ಮಲ್ಲಯ್ಯ ವೃತ್ತದಿಂದ ಪ್ರಮುಖ ಮಾರ್ಗಗಳ ಮೂಲಕವಾಗಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ವರೆಗೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸಂಘಟನೆಗಳ ಮುಖಂಡ ಆರ್.ಕೆ. ದೇಸಾಯಿ ಮಾತನಾಡಿ, ರೈತರ, ಕೃಷಿ ಕೂಲಿಕಾರರ ಸಾಲ ಮನ್ನಾ ಮಾಡಬೇಕು ಮತ್ತು ರೈತರಿಗೆ ಬಡ್ಡಿ ರಹಿತ ಸುಲಭ ಸಾಲ ಸಿಗುವಂತೆ ಕಾನೂನು ಮಾಡಬೇಕು, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ, ಬೀಜ, ಕೃಷಿ ಸಲಕರಣೆ ಸಿಗುವಂತೆ ಯೋಜನೆ ರೂಪಿಸಬೇಕು. ತಾಲೂಕಿನ ಎಲ್ಲ ಕೆರೆಗಳಿಗೆ ಕೃಷ್ಣಾ ಬಿ ಸ್ಕಿಂನಲ್ಲಿ ನೀರು ತುಂಬಿಸುವ ಕೆಲಸಕ್ಕೆ ವೇಗ ನೀಡಬೇಕು ಎಂದು ಒತ್ತಾಯಿಸಿದರು.ಕಲಾವತಿ ಮೆಣೇದಾಳ ಮಾತನಾಡಿ, ಅಂಗನವಾಡಿ ನೌಕರರಿಗೆ ₹ 26 ಸಾವಿರ ಕನಿಷ್ಠ ವೇತನ ಹಾಗೂ ಮಾಸಿಕ ಪಿಂಚಣಿ ₹ 10 ಸಾವಿರ ಕೊಡಬೇಕು. 29 ಕಾರ್ಮಿಕ ಕಾನೂನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಸಂಹಿತೆ ರದ್ದುಗೊಳಿಸಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು ಎಂದರು.