ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳು ಹೊರತುಪಡಿಸಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟಿನ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದರು.
ತಾಲೂಕು ರೈತ ಹಿತರಕ್ಷಣಾ ವೇದಿಕೆ ಹೆಸರಿನೊಂದಿಗೆ ವಕ್ಫ್ ಬೋರ್ಡ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಹಿಂದೂ ಜಾಗರಣಾ ವೇದಿಕೆ, ಆರ್.ಎಸ್.ಎಸ್, ರೈತಸಂಘ, ಕನ್ನಡ ರಕ್ಷಣಾ ವೇದಿಕೆ, ಮಂಡ್ಯ ರಕ್ಷಣಾ ವೇದಿಕೆ, ಕಸಾಪ, ಪತ್ರಕರ್ತರ ಸಂಘ, ವಕೀಲರ ಸಂಘ, ಬ್ರಾಹ್ಮಣರ ಸಂಘ, ಸವಿತ ಸಮಾಜ, ಬೀದಿ ಬದಿ, ರಸ್ತೆ ವ್ಯಾಪಾರಸ್ಥರ ಸಂಘ, ಪುರಸಭೆ ಸದಸ್ಯರು, ಶ್ರೀರಂಗನಾಥ ವ್ಯಾಪಾರಸ್ಥರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು.ಶ್ರೀರಂಗಪಟ್ಟಣ ಬಂದ್ ಮಾಡಿ ಸಂಘಟನೆಗಳ ಮುಖಂಡರು, ಸಾರ್ವಜನಿಕರು, ರೈತರು ವಕ್ಫ್ ಬೋರ್ಡ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರಮುಖ ರಸ್ತೆ ಮೂಲಕ ತಾಲೂಕು ಕಚೇರಿ ವರೆವಿಗೂ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಎದುರು ಧರಣಿ ನಡೆಸಿ ಶಾಸಕರು, ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕಾಗಮಿಸುವಂತೆ ಆಗ್ರಹಿಸಿದರು.
ವಕೀಲರ ಬೆಂಬಲ:
ತಾಲೂಕು ಕಚೇರಿಗೆ ಮುತ್ತಿಗೆ ಯತ್ನ:
ಮಸೀದಿಗೆ ಬಿಗಿ ಭದ್ರತೆ:
ಅಂಗಡಿ ಮುಂಗ್ಗಟ್ಟುಗಳು ಬಹುತೇಕ ಬಂದ್:
ಲಘು ಉಪಾಹಾರ:
ಶ್ರೀರಂಗಪಟ್ಟಣ ಬಂದ್ ವೇಳೆ ವೇದಿಕೆ ವತಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಪ್ರತಿಭಟನಾ ಸ್ಥಳದಲ್ಲೇ ಬಾತ್ ತಯಾರಿಸಿ ಉಣಬಡಿಸಿದರು.ರೈತ ಹೋರಾಟಗಾರ ಕೆ.ಎಸ್ ನಂಜುಂಡೇಗೌಡ ಮಾತನಾಡಿ, ರೈತರ ಆತಂಕಕ್ಕೆ ಮೂಲ ಕಾರಣ ಕಾಂಗ್ರೆಸ್ ಸರ್ಕಾರ. ವಕ್ಫ್ ಬೋರ್ಡ್‌ನಿಂದ ಶ್ರೀರಂಗಪಟ್ಟಣದ ಎಲ್ಲಾ ರೈತರಲ್ಲೂ ಆತಂಕಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವೊಬ್ಬ ರೈತರ ಆರ್‌ಟಿಸಿಗಳಲ್ಲಿ ವಕ್ಫ್ ಬೋರ್ಡ್ ಎಂದು ನಮೂದಾಗಿರುವುದು ಕಂಡು ಬಂದಲ್ಲಿ, ರೈತರ ಪರವಾಗಿ ಜಿಲ್ಲಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಚಂದನ್ ಮಾತನಾಡಿ, ಶ್ರೀರಂಗಪಟ್ಟಣ ಬಂದ್‌ಗೆ ಆಗಮಿಸುವಂತೆ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ತಿಳಿಸಲಾಗುತ್ತು. ಆದರೆ, ಬಂದಿಲ್ಲ. ಇದರಿಂದ ಕ್ಷೇತ್ರದ ರೈತರ ಬಗ್ಗೆ ಅವರಲ್ಲಿ ಕಾಳಜಿ ಇಲ್ಲ ಎಂಬುದು ತೋರುತ್ತಿದೆ ಎಂದು ಕಿಡಿಕಾರಿದರು.ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಡಳಿತದ ಪರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಆಗಮಿಸಿ ಮನವಿ ಸ್ವೀಕರಿಸಿ, ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅಮರಣಾಂತರ ಉಪವಾಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜ.30ರ ವರೆಗೆ ಅಧಿಕಾರಿಗಳ ಕಾರ್ಯವೈಖರಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಎಸಿ ಶ್ರೀನಿವಾಸ್ ಮಾತನಾಡಿ, ಈ ಸಂಬಂಧ ಜಿಲ್ಲಾಧಿಕಾರಿಗಳು ಸಭೆ ಕರೆದಿದ್ದಾರೆ. ತಮ್ಮ ಎಲ್ಲಾ ಬೇಡಿಕೆಗಳನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಲ್ಲಿ ಯಶಸ್ವಿಯಾದರು.ಇದೇ ವೇಳೆ ಅಮರಣಾಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂರ್‍ನಾಲ್ಕು ಮಂದಿಗೆ ಸ್ವತಃ ತಾವೇ ನೀರು ಕುಡಿಸಿದರು. ಬಳಿಕ ಪ್ರತಿಭಟನಾಕಾರರು ಸಚಿವ ಜಮೀರ್ ಅಹಮದ್ ಖಾನ್ ಭಾವಚಿತ್ರಕ್ಕೆ ಬೆಂಕಿ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ನಂತರ ಪ್ರತಿಭಟನೆಯನ್ನು ಮುಂದೂಡಿದರು.
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.