ಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳವಳ್ಳಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಮಳವಳ್ಳಿ ವಕೀಲರ ಸಂಘದಿಂದ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಿಂದಲೇ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡು, ಗುರು ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಕಾನೂನು ಮತ್ತು ಕಾಯ್ದೆಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.ಕಾನೂನಿನ ಅರಿವಿನ ಕೊರತೆಯಿಂದ ಅನೇಕ ಅಪರಾಧಗಳು ನಡೆಯುತ್ತಿವೆ. ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಜೀವನ ನಡೆಸಬೇಕು. ಕಾನೂನನ್ನು ಗೌರವಿಸುವ ಜೊತೆಗೆ ಅದರ ಬಗ್ಗೆ ಅರಿವು ಹೊಂದಬೇಕು ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಶ್ರೀಕಂಠಸ್ವಾಮಿ ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ಎಲ್ಲವೂ ಆಕರ್ಷಕವಾಗಿ ಕಾಣುತ್ತದೆ. ಈ ಹಂತದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ ದಾರಿ ತಪ್ಪುವ ಸಾಧ್ಯತೆ ಹೆಚ್ಚಿರುತ್ತದೆ. ಮೊಬೈಲ್ ಬಳಕೆಯಲ್ಲಿಯೂ ಎಚ್ಚರಿಕೆ ವಹಿಸಬೇಕು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಶಂಕರಸ್ವಾಮಿ, ಶಿವಕುಮಾರ್, ಶ್ರೀಕಂಠಸ್ವಾಮಿ, ಮಳವಳ್ಳಿ ವಕೀಲರ ಸಂಘದ ಕಾರ್ಯದರ್ಶಿ ನಟೇಶ್, ಉಪಾಧ್ಯಕ್ಷ ಮಲ್ಲಪ್ಪ, ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ್, ಬಿಇಒ ಉಮಾ ಮುಖ್ಯ ಶಿಕ್ಷಕಿ ಶಕುಂತಲಾ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಪುಟ್ಟರಾಜು, ಸೇರಿದಂತೆ ಇತರರು ಇದ್ದರು.