ಮತದಾನ ಜಾಗೃತಿಗಾಗಿ ಅಧಿಕಾರಿ, ನೌಕರರಿಂದ ವಾಕಥಾನ್

KannadaprabhaNewsNetwork |  
Published : Feb 27, 2024, 01:32 AM IST
ಮತದಾನ ಜಾಗೃತಿಗಾಗಿ  ಅಧಿಕಾರಿ, ನೌಕರರಿಂದ ವಾಕಥಾನ್ | Kannada Prabha

ಸಾರಾಂಶ

ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು

ಕನ್ನಡಪ್ರಭ ವಾರ್ತೆ ಚಾಮರಾಜನಗರಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಳ್ಳಲಾಗಿದ್ದ ವಾಕಥಾನ್ ನಡಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಎಡಿಸಿ ಗೀತಾ ಹುಡೇದ ಈ ಬಾರಿ ಚುನಾವಣಾ ಪರ್ವ-ದೇಶದ ಗರ್ವ ಎಂಬ ಘೋಷಣೆಯೊಂದಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾರ್ವಜನಿಕರು, ೧೮ ವರ್ಷ ತುಂಬಿದ ಯುವ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಬೇಕು. ದೇಶದ ಪ್ರಜಾಪ್ರಭುತ್ವ ಬಲಿಷ್ಠತೆಗೆ ಯುವಜನತೆ ಮುಂದಾಗಬೇಕು ಎಂದರು. ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ವಾಕಥಾನ್ ನಗರದ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನ ತಲುಪಿತು. ವಾಕಥಾನ್‌ನಲ್ಲಿ ಮತದಾನ ಜಾಗೃತಿ ಮೂಡಿಸುವ ಫಲಕಗಳನ್ನಿಡಿದ ಅಧಿಕಾರಿ, ನೌಕರರು ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಘೋಷಣೆ ಮೊಳಗಿಸಿದರು. ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಕ್ರೀಡಾಂಗಣ ಅಭಿವೃಧಿ ಸಮಿತಿ ಸದಸ್ಯ ಶ್ರೀನಿವಾಸ ಪ್ರಸಾದ್, ಇತರರು ವಾಕಥಾನ್‌ನಲ್ಲಿ ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ