ದೊಡ್ಡಬಳ್ಳಾಪುರ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಸಂದರ್ಭದಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಪ್ರಾಧಿಕಾರ ನೀಡಿರುವ ನಿರ್ದೇಶನ ಖಂಡಿಸಿ ಇಲ್ಲಿನ ಕನ್ನಡ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರ ಈ ಕೂಡಲೇ ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆಗೆ ಮುಂದಾಗಬೇಕು. ಕಾವೇರಿ ಪ್ರಾಧಿಕಾರ, ನ್ಯಾಯಾಧಿಕಾರಣ ಮತ್ತು ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಅರ್ಥ ಮಾಡಿಸಬೇಕು. ಪದೇ ಪದೇ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯಬೇಕು. ರಾಜ್ಯದಲ್ಲಿ ಕುಡಿಯಲೂ ನೀರಿಲ್ಲದ ಪರಿಸ್ಥಿತಿ ಇರುವಾಗ ತಮಿಳುನಾಡಿನಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಹರಿಸಬೇಕು ಎಂಬುದು ನ್ಯಾಯ ಸಮ್ಮತವಲ್ಲ ಎಂದರು.
ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ, ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ, ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಲೇ ಇದೆ. ಕಾವೇರಿ ವಿಚಾರದಲ್ಲಂತೂ ಕಳೆದ ಹಲವು ದಶಕಗಳಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ. ಮೇಕೆದಾಟು ಯೋಜನೆಗೆ ಅಡ್ಡಿಪಡಿಸುವ ತಮಿಳುನಾಡು ಕಾವೇರಿ ನೀರಿಗೆ ಪದೇ ಪದೇ ಅವೈಜ್ಞಾನಿಕವಾಗಿ ಬೇಡಿಕೆ ಇಡುತ್ತಲೇ ಬರುತ್ತಿದೆ. ಮಳೆ ಹೆಚ್ಚಾದಾಗ ರಾಜ್ಯದಿಂದ ಹರಿದಿರುವ ಹೆಚ್ಚುವರಿ ನೀರಿನ ಲೆಕ್ಕವನ್ನು ಆ ರಾಜ್ಯ ನಿರ್ಲಕ್ಷಿಸಿದೆ ಎಂದರು.ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ಹರಿಸಿದ್ದೇ ಆದಲ್ಲಿ ಗಂಭೀರ ಸ್ವರೂಪದ ಹೋರಾಟಕ್ಕೆ ರೈತರು, ಕನ್ನಡ ಸಂಘಟನೆಗಳು ಮುಂದಾಗಲಿವೆ ಎಂದು ಎಚ್ಚರಿಕೆ ನೀಡಲಾಯಿತು.
29ಕೆಡಿಬಿಪಿ2- ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ಪ್ರಾಧಿಕಾರದ ನಿರ್ದೇಶನ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
29ಕೆಡಿಬಿಪಿ3-