ಧಾರವಾಡ ಪ್ರತ್ಯೇಕ ಪಾಲಿಕೆ ವಾಗ್ದಾನ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆ

KannadaprabhaNewsNetwork |  
Published : Aug 04, 2026, 01:45 AM IST
ಧಾರವಾಡ ಮಹಾನಗರ ಪಾಲಿಕೆ | Kannada Prabha

ಸಾರಾಂಶ

ಹೋರಾಟಗಾರರು ಹಾಗೂ ಧಾರವಾಡದ ಸಾರ್ವಜನಿಕರ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತ್ಯೇಕ ಪಾಲಿಕೆ ಹೋರಾಟವನ್ನು ತಣ್ಣಗಾಗಿಸಲು ಕಾಂಗ್ರೆಸ್ ಮುಖಂಡರು ಸುಳ್ಳು ಭರವಸೆ ನೀಡಿದ್ದರೆ ಎಂದು ನಾಗರಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

Dharwad News: Separate City Corporation

ಧಾರವಾಡ ಪ್ರತ್ಯೇಕ ಪಾಲಿಕೆ ವಾಗ್ದಾನ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆ, Warning of agitation if the promise of a separate Dharwad City Corporation is not fulfilled

ಧಾರವಾಡ ಸುದ್ದಿ, ಪ್ರತ್ಯೇಕ ಮಹಾನಗರ ಪಾಲಿಕೆ, ಸಮಾನ ಮನಸ್ಕರ ವೇದಿಕೆಯ ಗೆಳೆಯರ ಬಳಗ, Dharwad News, Separate City Corporation, ''Samana Manaskara Vedike Friends Group

ಧಾರವಾಡ:

ಅಧಿಕಾರಕ್ಕೇರಿದ ಒಂದು ತಿಂಗಳಲ್ಲಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಯ ಅಧಿಕೃತ ಆದೇಶ ಹೊರಡಿಸುವುದಾಗಿ ವಾಗ್ದಾನ ನೀಡಿದ್ದ ಕಾಂಗ್ರೆಸ್ ನಾಯಕರು, ಗಡುವು ಮುಗಿದರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆಯ ಗೆಳೆಯರ ಬಳಗ ಖಡಕ್ ಆಕ್ರೋಶ ವ್ಯಕ್ತಪಡಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಮೋಹನ ರಾಮದುರ್ಗ, ನೀಡಿದ ಮಾತು ತಪ್ಪಿದ ನಾಯಕರ ವಿರುದ್ಧ ಕಿಡಿಕಾರಿದರು.ಹೋರಾಟಗಾರರು ಹಾಗೂ ಧಾರವಾಡದ ಸಾರ್ವಜನಿಕರ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತ್ಯೇಕ ಪಾಲಿಕೆ ಹೋರಾಟವನ್ನು ತಣ್ಣಗಾಗಿಸಲು ಕಾಂಗ್ರೆಸ್ ಮುಖಂಡರು ಸುಳ್ಳು ಭರವಸೆ ನೀಡಿದ್ದರೆ ಎಂದು ನಾಗರಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದ ಅವರು, ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ಒಂದೇ ತಿಂಗಳಲ್ಲಿ ಪ್ರತ್ಯೇಕ ಪಾಲಿಕೆ ಘೋಷಣೆ ಮಾಡಿಸುತ್ತೇವೆ " ಎಂದು ಗಂಟಾಘೋಷವಾಗಿ ಹೇಳಿದ್ದ ಧೀರ ನಾಯಕರು ಈಗ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದರು.

ಸಾರ್ವಜನಿಕರು ಬಲಿ:

ಆರಂಭದಲ್ಲಿ ಈ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಮತ್ತು ರಾಜ್ಯಪಾಲರ ಮೇಲೆ ಒತ್ತಡ ಹೇರಿದ್ದಾಗಿ ಆರೋಪಿಸಿದ್ದ ಕಾಂಗ್ರೆಸ್ ನಾಯಕರು, ಬಿಜೆಪಿಯನ್ನು ಕಟುವಾಗಿ ಟೀಕಿಸಿದ್ದರು. ಆದರೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ಪಾಲಿಕೆ ಹೋರಾಟಗಾರರು ರಾಜ್ಯಪಾಲರನ್ನು ಭೇಟಿಯಾಗಿದ್ದು ಸ್ಮರಿಸಿದರು.ಅಲ್ಲದೇ, ರಾಜ್ಯಪಾಲರು ಕೂಡ ನಿಯೋಗದ ಮನವಿಗೆ ಸ್ಪಂದಿಸಿ, ಸೂಕ್ತ ಕ್ರಮಕ್ಕಾಗಿ ಕಡತವನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಹೀಗಿದ್ದರೂ, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಪ್ರತ್ಯೇಕ ಪಾಲಿಕೆಗೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.ಉಗ್ರ ಹೋರಾಟದ ಮುನ್ನೆಚ್ಚರಿಕೆ:

ನೀಡಿದ್ದ ಗಡುವು ಮುಗಿದಿರುವ ಹಿನ್ನೆಲೆಯಲ್ಲಿ, ಪ್ರತ್ಯೇಕ ಧಾರವಾಡ ಪಾಲಿಕೆ ರಚನೆ ಕುರಿತು ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಆಡಳಿತಾರೂಢ ನಾಯಕರು ತಕ್ಷಣವೇ ಬಹಿರಂಗಪಡಿಸಬೇಕು. ಇಲ್ಲವಾದಲ್ಲಿ ಧಾರವಾಡದ ಜನತೆಯನ್ನು ಒಂದಗೂಡಿಸಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಉಗ್ರ ಜನಾಂದೋಲನ ನಡೆದರೆ, ಇದಕ್ಕೆ ಕಾಂಗ್ರೆಸ್ ನಾಯಕರೇ ಹೊಣೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಾನ ಮನಸ್ಕರ ವೇದಿಕೆ ಪ್ರಮುಖರಾದ ಶಿವಾನಂದ ಕವಳಿ, ಭೀಮರಾವ ಸವನೂರ, ಮಲ್ಲಿಕಾರ್ಜುನ, ಸಂಜಯ ಪಾಲನಕರ ಇದ್ದರು.ಧಾರವಾಡದ ಜನರ ಭಾವನೆಗಳೊಂದಿಗೆ ಆಟವಾಡುವುದು ಮತ್ತು ರಾಜಕೀಯ ಲಾಭಕ್ಕಾಗಿ ಭರವಸೆ ನೀಡಿ ಮರೆತು ಬಿಡುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ದ್ರೋಹ.

ಮೋಹನ ರಾಮದುರ್ಗ ಅಧ್ಯಕ್ಷರು, ಸಮಾನ ಮನಸ್ಕರ ವೇದಿಕೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಹರಿಕಾರ ರಾಯರಡ್ಡಿಗೆ ಮಂತ್ರಿಪಟ್ಟ
ಕೊಪ್ಪಳ ಜಿಲ್ಲೆಗೆ ಡಬಲ್ ಧಮಾಕಾ