ಕುಂದಗೋಳ: ತಾಲೂಕಿನ ಕೆಲ ಭಾಗಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆಯ ಡಿಸಿಗೆ ಲಿಖಿತ ಮನವಿ ನೀಡಿದರೂ ಸ್ಪಂದಿಸುತ್ತಿಲ್ಲ. ಮೇ 15ರ ಒಳಗೆ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸುವುದಾಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಎಚ್ಚರಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ 357 ಫಲಾನುಭವಿಗಳಿಗೆ ಹಣ ಜಮೆ ಆಗಿಲ್ಲ. ಇದರಲ್ಲಿ ಐಟಿ, ಜಿಎಸ್‌ಟಿ ಹೊಂದಿರುವ ಕೆಲವು ಫಲಾನುಭವಿಗಳಿದ್ದು, ಮೇಲಧಿಕಾರಿಗಳ ಜತೆ ಚರ್ಚಿಸಿ ಸರಿಪಡಿಸುವುದಾಗಿ ಹೇಳಿದರು.
ಗ್ಯಾರಂಟಿ ಸಮಿತಿ ಸದಸ್ಯ ಅಡಿವೆಪ್ಪ ಹೆಬಸೂರ ಮಾತನಾಡಿದರು. ಹೆಸ್ಕಾಂ ಅಧಿಕಾರಿ ಹಾಗೂ ಯುವ ನಿಧಿ ಯೋಜನೆ ಸಂಬಂಧಿಸಿದಂತೆ ಅಧಿಕಾರಿಗಳು ಮಾತನಾಡಿದರು. ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಶಶಿಧರ ಸೋಮರೆಡ್ಡಿ, ಅಡಿವಪ್ಪ ಹೆಬಸೂರ, ಚಂದ್ರು ಕಾಳೆ, ಯಲ್ಲಪ್ಪ ಸಿಂಗನ್ನವರ, ಶಂಕ್ರಪ್ಪ ಹಡಪದ, ಬಸಮ್ಮ ಸುಳ್ಳಿಕೆರೆ ಸೇರಿದಂತೆ ಅನೇಕರಿದ್ದರು.