ಗ್ಯಾರಂಟಿ ರೂಪದಲ್ಲಿ ಹಣ ಪೋಲು: ಮುನಿರತ್ನ ಆರೋಪ

KannadaprabhaNewsNetwork |  
Published : Feb 05, 2024, 01:47 AM IST
ಮುನಿರತ್ನ | Kannada Prabha

ಸಾರಾಂಶ

52 ಸಾವಿರ ಕೋಟಿ ರು. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಪೋಲು ಮಾಡಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

52 ಸಾವಿರ ಕೋಟಿ ರು. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಪೋಲು ಮಾಡಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪದೇಪದೇ ಹಣ ಕೇಳಿಕೊಂಡು ಇವರು ಕೇಂದ್ರಕ್ಕೆ ಹೋಗುತ್ತಿದ್ದಾರೆ. ತೆರಿಗೆ ಹಣವನ್ನು ದಾನ ಮಾಡುವ ಮುಂಚೆ ಯೋಚನೆ ಮಾಡಬೇಕಿತ್ತು ಎಂದಿದ್ದಾರೆ. ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಘೋಷಣೆ ಮಾಡುವ ಮುಂಚೆ ಯೋಚನೆ ಮಾಡಬೇಕಿತ್ತು. ಯಾವುದೇ ಯೋಚನೆ ಮಾಡದೆ ಅಧಿಕಾರದ ದಾಹಕ್ಕಾಗಿ ಐದು ಗ್ಯಾರಂಟಿ ಆರು ಗ್ಯಾರೆಂಟಿ ಘೋಷಣೆ ಮಾಡಿದರು. ಇಲ್ಲಿ ದಾನ ಕೊಟ್ಟು ಅಲ್ಲಿ ಭಿಕ್ಷೆ ಬೇಡಲು ಹೋಗುತ್ತಾರೆ ಎಂದು ಹರಿಹಾಯ್ದರು.

ಇವರು ಕೇಂದ್ರದಿಂದ ಹಣ ಕೇಳೋದು ರಾಜ್ಯದ ಅಭಿವೃದ್ಧಿಗಲ್ಲ, ಹಣತಂದು ಲೋಕಸಭಾ ಚುನಾವಣೆಗೆ ಇನ್ನಷ್ಟು ಗ್ಯಾರಂಟಿ ಕೊಡಲು ಎಂದ ಮುನಿರತ್ನ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ನವರು ಗ್ಯಾರಂಟಿ ನಿಲ್ಲಿಸುತ್ತಾರೆ ಎಂದರು.

ಮಾಗಡಿ ಶಾಸಕ ಬಾಲಕೃಷ್ಣ ಹೇಳಿರುವುದು ಸರಿಯಾಗಿದೆ. ಶಾಸಕ ಬಾಲಕೃಷ್ಣ ಮಾತನಾಡುವಾಗ ವೇದಿಕೆ ಮೇಲೆ ಡಿ.ಕೆ. ಸುರೇಶ್ ಕೂಡ ಇದ್ದರು . ಹಾಗಾಗಿ ಮಾಗಡಿ ಬಾಲಕೃಷ್ಣರ ಮಾತಿಗೆ ಡಿ.ಕೆ. ಸುರೇಶ್ ಅವರ ಸಹಮತ ಕೂಡ ಇದೆ ಅಂತಾಯ್ತು ಎಂದರು.

ಕಾಂಗ್ರೆಸ್ ನವರಿಗೆ ಬಹುಶಃ ಪ್ರತ್ಯೇಕ ದೇಶ ಮಾಡೋದಕ್ಕೆ ಉತ್ತಮವಾದ ಆಲೋಚನೆ ಬಂದಿರಬೇಕು. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಬೆಂಬಲವಾಗಿ ನಿಲ್ಲುವುದಾಗಿ ತಿಳಿಸಿದ ಅವರು ಅಂತಹ ಮಹನೀಯರು ಮತ್ತೇ ಇಲ್ಲಿ ಹುಟ್ಟಬೇಕು. ಅವರಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಇರ್ತಿವಿ ಎಂದರು.

ಅಡ್ವಾಣಿಜಿಗೆ ಭಾರತ ರತ್ನ ಲಭಿಸಿರೋದು ಬಹಳ ಸಂತೋಷ. ಅವರ ಹೋರಾಟ ಇವತ್ತಿನದಲ್ಲ, ಬಹಳಷ್ಟು ಶ್ರಮ ಪಟ್ಟ ಈ ದೇಶದಲ್ಲಿನ ಹಿಂದೂ ಧರ್ಮವನ್ನು ಕಟ್ಟಿದವರು. ಮಾಜಿ ಪ್ರಧಾನಿ ವಾಜಪೇಯಿಯವರ ಜೊತೆಯಲ್ಲಿ ಕೆಲಸ ಮಾಡಿದ್ದವರು. ಅವರಿಗೆ ಭಾರತ ರತ್ನ ಕೊಟ್ಟಿರೋದು ಸೂಕ್ತ ವ್ಯಕ್ಯಿಗೆ ಸೂಕ್ತ ಸಮಯದಲ್ಲಿ ಕೊಟ್ಟಿದ್ದಾರೆ ಎಂದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ