ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಆಗ್ರಹಿಸಿ ವಾಟಾಳ್ ಪ್ರತಿಭಟನೆ

KannadaprabhaNewsNetwork |  
Published : Mar 10, 2026, 02:15 AM IST
25 | Kannada Prabha

ಸಾರಾಂಶ

ರಾಜ್ಯ ಬಜೆಟ್‌ ನಲ್ಲಿ ಕನ್ನಡ ಶಾಲೆಗಳ ಕಡೆಗಣನೆ ಖಂಡಿಸಿ ಮಾ.12 ರಂದು ರಾಜ್ಯಾದ್ಯಂತ ಇರುವ ಕನ್ನಡ ಶಾಲೆಗಳನ್ನು ಬಂದ್ ಮಾಡುತ್ತೇವೆ. ಇಂಗ್ಲಿಷ್ ಶಾಲೆಗಳಿಗೆ 3900 ಕೋಟಿ ರು. ಕೊಟ್ಟಿದ್ದೀರಿ. ಕನ್ನಡ ಶಾಲೆಗಳ ಅಭಿವೃದ್ಧಿಗೆ ನಯಾ ಪೈಸೆ ಘೋಷಣೆ ಮಾಡಿಲ್ಲ ಏಕೆ?.

ಕನ್ನಡಪ್ರಭ ವಾರ್ತೆ ಮೈಸೂರು

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಗರದ ಹಾರ್ಡಿಂಜ್ ವೃತ್ತದಲ್ಲಿ ಭಾನುವಾರ ಪ್ರತಿಭಟಿಸಿದರು.

ಬಜೆಟ್‌ ನಲ್ಲಿ ಕನ್ನಡ ಶಾಲೆಗಳ ಕಡೆಗಣನೆ ಖಂಡಿಸಿ ಮಾ.12 ರಂದು ರಾಜ್ಯಾದ್ಯಂತ ಇರುವ ಕನ್ನಡ ಶಾಲೆಗಳನ್ನು ಬಂದ್ ಮಾಡುತ್ತೇವೆ. ಇಂಗ್ಲಿಷ್ ಶಾಲೆಗಳಿಗೆ 3900 ಕೋಟಿ ರೂ. ಕೊಟ್ಟಿದ್ದೀರಿ. ಕನ್ನಡ ಶಾಲೆಗಳ ಅಭಿವೃದ್ಧಿಗೆ ನಯಾ ಪೈಸೆ ಘೋಷಣೆ ಮಾಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದರು.

ಸಿದ್ದರಾಮಯ್ಯ ಕನ್ನಡವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮವೇ ಇಲ್ಲ. ಕನ್ನಡ ಮಾಧ್ಯಮ ಇರುವುದು ಸರ್ಕಾರಿ ಶಾಲೆಗಳಲ್ಲಿ. ಸರ್ಕಾರಿ ಶಾಲೆ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ಕೊಡಬೇಕಿತ್ತು. ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಮಾ.12 ರಂದು ಎಲ್ಲಾ ಕನ್ನಡ ಶಾಲೆಗಳ ಬಂದ್ ಮಾಡಲು ವಿವಿಧ ಕನ್ನಡ ಪರ ಸಂಘಟನೆಗಳು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆ ಖಂಡನಿಯ. ಮನೆಯಲ್ಲಿ ಮಕ್ಕಳು ಅವರ ಅಪ್ಪ, ಅಮ್ಮನ ಮೊಬೈಲ್ ಎತ್ತಿಕೊಂಡು ನೋಡುತ್ತಾರೆ. ಅವರನ್ನು ಏನು ಮಾಡಲು ಆಗುತ್ತೆ, ಜೈಲಿಗೆ ಹಾಕುವುದಕ್ಕೆ ಆಗುತ್ತಾ? ಕೊರೋನಾ ಸಂದರ್ಭದಲ್ಲಿ ಆನ್‌ ಲೈನ್ಕ್ಲಾ ಸ್ ಏಕೆ ಮಾಡುತ್ತಿದ್ದರು? ಮೊಬೈಲ್ ಜಗತ್ತಿನ ಮಾಹಿತಿ ತಿಳಿಯಲು ವಿದ್ಯಾರ್ಥಿಗಳಿಗೆ ಅನುಕೂಲ. ಮೊಬೈಲ್ ಬ್ಯಾನ್ ಅಥವಾ ಸಾಮಾಜಿಕ ಜಾಲತಾಣ ನಿಷೇಧ ಸರಿಯಲ್ಲ. ಸರ್ಕಾರದ ಈ ಆದೇಶ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಕನ್ನಡ ಚಳವಳಿಗಾರರಾದ ಮೂಗೂರು ನಂಜುಂಡಸ್ವಾಮಿ, ಶಿವಶಂಕರ್ ಮೊದಲಾದವರು ಇದ್ದರು.ವಾಣಿಜ್ಯ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕದಲ್ಲಿ ತಾರತಮ್ಯ: ಆರೋಪ

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯುಚ್ಚಕ್ತಿ ಇಲಾಖೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ 4,5,7 ಅಂತಸ್ತು ಎಚ್‌.ಟಿ.ಎಂ.ಎಸ್ ವಾಣಿಜ್ಯದ ಎಲ್ಲಾ ರೀತಿಯ ಕಟ್ಟಡಗಳಿಗೂ ವಿದ್ಯುತ್ ಸಂಪರ್ಕ ಒದಗಿಸುತ್ತಿದೆ ಎಂದು ನವ ಕರ್ನಾಟಕ ರೈತ ಸಂಘದ ಅಧ್ಯಕ್ಷ ಎಚ್.ವಿ.ಸುಬ್ಬೇಗೌಡ ಆರೋಪಿಸಿದರು.ಎಂಎಸ್ ಕಟ್ಟಡಗಳು ನಗರದ ಹೃದಯ ಭಾಗದಲ್ಲಿ ಇದ್ದರೂ ಕೂಡ ಕೆಲವೇ ಗುತ್ತಿಗೆದಾರರಿಗೆ, ಅದರಲ್ಲಿಯೂ ಓರ್ವರಿಗೆ ಒಸಿ, ಸಿಸಿ ಇಲ್ಲದಿದ್ದರೂ, ಆರ್‌ಎಂಯುಗಳನ್ನು ಅಳವಡಿಸದಿದ್ದರೂ ಕೂಡ ವಿದ್ಯುತ್ ಸಂಪರ್ಕ ನೀಡುತ್ತಿದ್ದಾರೆ. ಇತರೆ ಗುತ್ತಿಗೆದಾರರು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಓರ್ವರು ತಿಳಿಸುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡುತ್ತಿರುವಂತೆಯೇ ಇತರೆ ಗುತ್ತಿಗೆದಾರರಿಗೆ ನೀಡಬಹುದಾಗಿತ್ತು. ಆದರೆ ಈ ರೀತಿ ಮಾಡುತ್ತಿಲ್ಲ. ಇದು ಬೇಸರದ ಸಂಗತಿ. ಈ ವ್ಯಕ್ತಿ ಇತರರಿಗೂ ಅನುಕೂಲ ಕಲ್ಪಿಸುವ ಬದಲು ಮಾ. 11 ರಂದು ಪ್ರತಿಭಟನೆ ಮಾಡಹೊರಟಿರುವುದು ಸರಿಯಲ್ಲ. ಸೆಸ್ಕ್‌ ಅಧಿಕಾರಿಗಳು ಈ ರೀತಿ ವಿದ್ಯುತ್ ನೀಡುವುದು ಸರಿ ಎನ್ನುವುದಾದರೆ, ಇದು ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆ ಮಾಡಿದಂತಲ್ಲವೆ? ಇದೇ ರೀತಿ ಇತರರಿಗೂ ನೀಡಬಹುದಾಗಿತ್ತಲ್ಲವೇ ಎಂದು ಅವರು ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ನಾಗರಾಜ್, ಶ್ರೀನಿವಾಸ್, ಆಲೂರು ನಟೇಶ್, ನಾಗರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉನ್ನತ ಹುದ್ದೆ ಕನಸು ಈಡೇರಿಸಲು ಅಧ್ಯಯನ ಅವಶ್ಯಕ : ಶ್ರೀನಿವಾಸ್
ಕೆ.ಆರ್. ಆಸ್ಪತ್ರೆಯಲ್ಲಿ 100 ಹಾಸಿಗೆವುಳ್ಳ ಐ.ಸಿ.ಯು ಘಟಕ ಸ್ಥಾಪಿಸಿ: ಕೆ. ಶಿವಕುಮಾರ್