ಮಳೆ ಹಿನ್ನೆಲೆ ಕಟ್ಟೆಚ್ಚೆರ ವಹಿಸಿ: ಕೃಷ್ಣಬೈರೇಗೌಡ

KannadaprabhaNewsNetwork |  
Published : Jul 20, 2024, 12:47 AM IST
ಕ್ಯಾಪ್ಷನಃ19ಕೆಡಿವಿಜಿ36, 37ಃಕಂದಾಯ ಸಚಿವ ಕೃಷ್ಣಬೈರೇಗೌಡರೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್‌ ನಲ್ಲಿ ದಾವಣಗೆರೆ ಡಿಸಿ, ಸಿಇಓ ಇತರೆ ಅಧಿಕಾರಿಗಳು ಭಾಗವಹಿಸಿದ್ದರು. | Kannada Prabha

ಸಾರಾಂಶ

ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೋರಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ತಿ ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆ ಮಾಡಲು ಮುಂದಿನ ಮೂರು ದಿನಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

- ಜಿಲ್ಲಾಧಿಕಾರಿಗಳ ಜತೆ ಗಳೊಂದಿಗೆ ಕಂದಾಯ ಸಚಿವ ವೀಡಿಯೋ ಕಾನ್ಫರೆನ್ಸ್ । ತುರ್ತು ಕಾಮಗಾರಿಗಳಿಗೆ 15 ದಿನದೊಳಗೆ ಬಿಲ್‌ಗೆ ಸೂಚನೆ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೋರಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ತಿ ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆ ಮಾಡಲು ಮುಂದಿನ ಮೂರು ದಿನಗಳ ಕಾಲ ಕಟ್ಟೆಚ್ಚರ ವಹಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.

ಮಲೆನಾಡು, ಕರಾವಳಿ, ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಬಾಧಿತವಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ನಡೆಸಿ ಅವರು ಮಾತನಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಇದೆ. ಮಲೆನಾಡಿನಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯ ಮತ್ತು ಭದ್ರಾ ಜಲಾಶಯದಿಂದ ನೀರು ಬಿಟ್ಟಾಗ ಹೊನ್ನಾಳಿ, ಹರಿಹರದ ಕೆಲವು ಭಾಗದಲ್ಲಿ ಪ್ರವಾಹ ಉಂಟಾಗಬಹುದು. ಪ್ರಸ್ತುತ ತುಂಗಾ ನದಿಯಿಂದ ಮಾತ್ರ 80 ಸಾವಿರ ಕ್ಯುಸೆಕ್‌ ನೀರು ಹರಿಯುತ್ತಿದೆ. ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯುಸೆಕ್‌ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಭರ್ತಿಯಾಗದ ಕಾರಣ ಇಲ್ಲಿಂದ ನೀರು ಬಿಟ್ಟಿಲ್ಲ ಎಂದರು.

ರಸ್ತೆ ದುರಸ್ತಿ, ಶಾಲೆ, ಅಂಗನವಾಡಿಗಳ ದುರಸ್ತಿಗಾಗಿ ಪ್ರಕೃತಿ ವಿಕೋಪ ನಿಧಿಯಡಿ ಅನುದಾನವನ್ನು ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲೆಲ್ಲಿ ರಸ್ತೆ ಗುಂಡಿಗಳು ಬಿದ್ದಿವೆಯೋ, ಅಂತಹ ಕಡೆ ಒಂದು ಅಡಿ ಆಳ ತೆಗೆದು ಅದಕ್ಕೆ ಜಲ್ಲಿಕಲ್ಲುಗಳು ಮತ್ತು ಸಿಮೆಂಟ್ ವೆಟ್ ಮಿಕ್ಸಿಂಗ್ ಹಾಕಿ ತಾತ್ಕಾಲಿಕವಾಗಿ ಸರಿಪಡಿಸಬೇಕು. ಶಾಲಾ, ಅಂಗನವಾಡಿ ಕೇಂದ್ರಗಳಿದ್ದಲ್ಲಿ ಸೋರದಂತೆ ಹೊದಿಕೆ ಹಾಕಲು ಕ್ರಮ ವಹಿಸಲು ಸೂಚಿಸಿ, ತುರ್ತು ಕಾಮಗಾರಿಗಳನ್ನು ಕೈಗೊಂಡು ಮುಂದಿನ 15 ದಿನಗಳಲ್ಲಿ ಬಿಲ್ ಪಾವತಿಸಲು ಸೂಚನೆ ನೀಡಿದರು.

ಪ್ರವಾಸ ಕೈಗೊಳ್ಳಲು ಸೂಚನೆ:

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರತ್ಯೇಕವಾಗಿ ಪ್ರವಾಸ ಕೈಗೊಳ್ಳುವ ಮೂಲಕ ರಸ್ತೆ ದುರಸ್ತಿ, ಶಾಲೆ, ಅಂಗನವಾಡಿ, ವಿದ್ಯುತ್ ಸಂಪರ್ಕ ಕಡಿತ ದುರಸ್ತಿಯನ್ನು ಸ್ಥಳದಲ್ಲಿದ್ದು ಮಾಡಿಸಬೇಕು, ಪ್ರತಿಯೊಂದು ಕಾಮಗಾರಿಗಳ ವೀಕ್ಷಣೆ ಮಾಡಿದ ನಂತರವೇ ಅದರ ಬಿಲ್ ಪಾವತಿ ಮಾಡಲು ತಿಳಿಸಿದರು.

ವೀಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - -

ಬಾಕ್ಸ್‌ * ವಿಪತ್ತು ನಿರ್ವಹಣಾ ತಂಡ ಸನ್ನದ್ಧ: ಡಿಸಿ ವಿಡಿಯೋ ಕಾನ್ಸರೆನ್ಸ್‌ನಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿಲ್ಲ. ಈಗಾಗಲೇ ಎಲ್ಲ ಗ್ರಾಮ ಪಂಚಾಯಿತಿವಾರು ಟಾಸ್ಕ್ ಪೋರ್ಸ್ ಸಮಿತಿ ಸಕ್ರಿಯಗೊಳಿಸಿದ್ದು, ನದಿಯಲ್ಲಿ ಹರಿಯುತ್ತಿರುವ ನೀರಿನ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಲಕ್ಷಕ್ಕಿಂತ ಅಧಿಕ ಕ್ಯುಸೆಕ್‌ ಬಂದಾಗ ಕೆಲವು ಕಡೆ ಮಾತ್ರ ಸಮಸ್ಯೆಯಾಗಲಿದೆ. ಅಂತಹ ಕಡೆ 44 ಕುಟುಂಬಗಳನ್ನು ಗುರುತಿಸಲಾಗಿದೆ. ವಿಪತ್ತು ನಿರ್ವಹಣಾ ತಂಡವನ್ನು ಸಹ ಸನ್ನದ್ಧವಾಗಿಡಲಾಗಿದೆ ಎಂದು ತಿಳಿಸಿದರು.

- - - -19ಕೆಡಿವಿಜಿ36, 37ಃ:

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ನಡೆಸಿದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ದಾವಣಗೆರೆ ಡಿಸಿ, ಸಿಇಒ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ