ಗೌರಿ ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಹರಿದ ಜೀವಗಂಗೆ!

KannadaprabhaNewsNetwork |  
Published : Mar 07, 2024, 01:55 AM ISTUpdated : Mar 07, 2024, 09:48 AM IST
ಗೌರಿ  ತೆಗೆದ ಬಾವಿಯಲ್ಲಿ ಹರಿದ ಜೀವಗಂಗೆ | Kannada Prabha

ಸಾರಾಂಶ

ಕಳೆದ ೩೬ ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಶಿರಸಿ

ಕಳೆದ ೩೬ ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸುಮಾರು ೫೦ ಅಡಿ ಬಾವಿ ತೋಡಿ, ಗಂಗೆಯನ್ನು ಹೊರತರುವಲ್ಲಿ ಸಫಲರಾಗಿದ್ದಾರೆ. ಗೌರಿಯ ಈ ಸಾಧನೆಗೆ ಸ್ಥಳೀಯ ಸಾರ್ವಜನಿಕರು ತೀವ್ರ ಸಂತೋಷ ವ್ಯಕ್ತಪಡಿಸಿ, ಗ್ರಾಮದ ಸುತ್ತಲೂ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಜ. ೩೦ರಂದು ಶಿರಸಿ ಗಣೇಶ ನಗರದ ಅಂಗನವಾಡಿ ನಂಬರ್ ೬ರಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಕೊರತೆ ಕಂಡು ಶಾಶ್ವತ ಪರಿಹಾರ ಕಲ್ಪಿಸಲು ಗೌರಿ ನಾಯ್ಕ (58) ಬಾವಿ ತೋಡಲು ಶ್ರೀಕಾರ ಹಾಕಿದ್ದರು. 

೩೦ ಅಡಿ ಆಳ ಬಾವಿ ತೆಗೆದ ಗೌರಿಯ ಸಾಹಸವನ್ನು ಮಾಧ್ಯಮಗಳು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡ್ಡಗಾಲು ಹಾಕಿ, ಬಾವಿ ಮುಚ್ಚಿಸಲಾಗಿತ್ತು. 

ಅದನ್ನು ಖಂಡಿಸಿ ಸ್ಥಳೀಯರು ಪ್ರತಿಭಟಿಸಿ, ಸಹಾಯಕ ಆಯುಕ್ತರ ಕಚೇರಿಗೆ ಹಾಗೂ ತಹಸೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದ್ದರು. 

ಸಂಸದ ಅನಂತಕುಮಾರ ಹೆಗಡೆ ಬಾವಿ ತೆಗೆಯುತ್ತಿದ್ದ ಸ್ಥಳಕ್ಕೆ ತೆರಳಿ ಜಿಲ್ಲಾಧಿಕಾರಿ ಜತೆ ಮಾತನಾಡಿ, ತಕ್ಷಣವೇ ಗೌರಿಗೆ ಬಾವಿ ತೋಡಲು ಅವಕಾಶ ನೀಡಬೇಕು. 

ಅಡೆತಡೆ ಮಾಡಬಾರದು ಎಂದು ಸೂಚನೆ ನೀಡಿದ್ದರು. ಇದರಿಂದ ಮತ್ತೆ ಬಾವಿ ತೋಡಲು ಪ್ರಾರಂಭಿಸಿದ ಗೌರಿ ನಾಯ್ಕ ಕೊನೆಗೂ ತಮ್ಮ ಸಾಧನೆ ಮಾಡಲು ಯಶಸ್ವಿಯಾಗಿದ್ದಾರೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...