ಅನಿಕೇತನ ಲಯನ್ಸ್ ಕ್ಲಬ್ ನಿಂದ ವಾಟರ್ ಕ್ಯಾನ್ ವಿತರಣೆ

KannadaprabhaNewsNetwork |  
Published : Sep 18, 2025, 01:10 AM IST
17ಕೆಎಂಎನ್ ಡಿ18 | Kannada Prabha

ಸಾರಾಂಶ

ಪ್ರಧಾನಿ ಮೋದಿ ಅವರು ದೇಶಕ್ಕಾಗಿ ಹೆಚ್ಚು ಸೇವೆ ಸಲ್ಲಿಸುತ್ತಿದ್ದಾರೆ. ಬಡವರ ಏಳ್ಗೆ ಹಾಗೂ ದೇಶದ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇನ್ನೂ ಹೆಚ್ಚಿನ ದೇಶ ಸೇವೆ ಮಾಡಲು ದೇವರು ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ.

ಕನ್ನಡಪ್ರಭ ವಾರ್ತೆ ಹಲಗೂರು

ಅನಿಕೇತನ ಲಯನ್ಸ್ ಕ್ಲಬ್‌ನಿಂದ ಮೋದಿ ರವಿ ಅವರು ರಾಮಮಂದಿರ ದೇವಸ್ಥಾನದ ಆವರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಉಚಿತವಾಗಿ ಸುಮಾರು 125 ನೀರಿನ ಕ್ಯಾನ್‌ಗಳನ್ನು ವಿತರಿಸಿದರು.

ಈ ವೇಳೆ ಸಂಘದ ಸದಸ್ಯ ಮೂರ್ತಿ ಮಾತನಾಡಿ, ಪ್ರಧಾನಿ ಮೋದಿ ಅವರು ದೇಶಕ್ಕಾಗಿ ಹೆಚ್ಚು ಸೇವೆ ಸಲ್ಲಿಸುತ್ತಿದ್ದಾರೆ. ಬಡವರ ಏಳ್ಗೆ ಹಾಗೂ ದೇಶದ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇನ್ನೂ ಹೆಚ್ಚಿನ ದೇಶ ಸೇವೆ ಮಾಡಲು ದೇವರು ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

ಅಭಿಮಾನಿ ಮತ್ತು ಬಿಜೆಪಿ ಕಾರ್ಯಕರ್ತನಾಗಿರುವ ರವಿ ಮೋದಿ ಶುದ್ಧ ನೀರು ಕುಡಿಯಲು ನೀರು ತುಂಬಿರುವ ಸುಮಾರು 125 ಕ್ಯಾನುಗಳನ್ನು ವಿತರಿದ್ದಾರೆ ಎಂದರು. ಈ ವೇಳೆ ತಮ್ಮಣ್ಣಗೌಡ ,ಆನಂದ್, ಮೂರ್ತಿ, ಅನಿಕೇತನ ಲಯನ್ಸ್ ಕ್ಲಬ್ ನಅಧ್ಯಕ್ಷ ಜಗದೀಶ, ಸದಾಶಿವ ಮತ್ತು ಇತರರು ಇದ್ದರು.

ಶ್ರೀರಂಗಪಟ್ಟಣ ದಸರಾ: ಟಿ.ಎಸ್‌.ನಾಗಾಭರಣರಿಗೆ ಆಹ್ವಾನ

ಕನ್ನಡಪ್ರಭ ವಾರ್ತೆ ಮಂಡ್ಯ

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಆಗಮಿಸುವಂತೆ ನಟ, ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್‌.ನಂದಿನಿ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರು ಬೆಂಗಳೂರಿನಲ್ಲಿರುವ ನಾಗಾಭರಣ ಅವರ ಕಚೇರಿಗೆ ಭೇಟಿ ನೀಡಿ ಅಭಿನಂದಿಸುವುದರೊಂದಿಗೆ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ನೀಡಿದರು.ಇಂದು ಮದ್ಯದ ಅಂಗಡಿಗಳು ಬಂದ್

ಮದ್ದೂರು: ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಮುಂಜಾಗೃತ ಕ್ರಮವಾಗಿ ಸೆ.18ರ ಬೆಳಗ್ಗೆ 6 ರಿಂದ ಸೆ.19ರ ಬೆಳಗ್ಗೆ 6 ಗಂಟೆವರೆಗೆ ಪಟ್ಟಣ ವ್ಯಾಪ್ತಿಯ ಸುತ್ತಾಮುತ್ತ 5 ಕಿ.ಮೀ ವ್ಯಾಪ್ತಿ ಎಲ್ಲಾ ಮಾದರಿಯ ಮದ್ಯದ ಅಂಗಡಿಗಳು, ಬಾರ್ ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ನಿಷೇಧರಿಸಿ ಜಿಲ್ಲಾಧಿಕಾರಿಗಳಉ ಆದೇಶ ಹೊರಡಿಸಿದ್ದಾರೆ.ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ: 66/11 ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 19 ರಂದು ಬೆಳಗ್ಗೆ 9 ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತಾಲೂಕಿನ ತೂಬಿನಕೆರೆ, ತೂಬಿನಕೆರೆ ಇಂಡಸ್ಟ್ರೀಯಲ್ ಏರಿಯಾ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ , ಕೊಡಿಯಾಲ, ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯ ಚಾವಿಸನಿನಿ, ಕಾ ಮತ್ತು ಪಾ ವಿಭಾಗ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ