ಪ್ರಾಣಿ ಪಕ್ಷಿಗಳ ರಕ್ಷಣೆಗೆ ಸಾಮೂಹಿಕ ಹೊಣೆಗಾರಿಕೆ ಅಗತ್ಯ: ದರ್ಶನ್

KannadaprabhaNewsNetwork |  
Published : Apr 17, 2026, 02:45 AM IST
ಮಂಗಳೂರು: ಜೀವ ಜಲ ಉಳಿಸಿ ಅಭಿಯಾನ | Kannada Prabha

ಸಾರಾಂಶ

ಮನುಷ್ಯರಂತೆ ಪ್ರಾಣಿ, ಪಕ್ಷಿಗಳಿಗೂ ನೀರಿನ ಅಗತ್ಯವಿದೆ. ಬೇಸಿಗೆಯಲ್ಲಿ ಮೂಕ ಜೀವಿಗಳಿಗೆ ಕುಡಿಯಲು ನೀರು ಒದಗಿಸುವ ಮೂಲಕ ಅವುಗಳ ರಕ್ಷಣೆಗೆ ವಿದ್ಯಾರ್ಥಿ ಸಮುದಾಯ ಸೇರಿದಂತೆ ಜನತೆ ಸಾಮೂಹಿಕ ಹೊಣೆಗಾರಿಕೆ ವಹಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.

ಮಂಗಳೂರು: ಮನುಷ್ಯರಂತೆ ಪ್ರಾಣಿ, ಪಕ್ಷಿಗಳಿಗೂ ನೀರಿನ ಅಗತ್ಯವಿದೆ. ಬೇಸಿಗೆಯಲ್ಲಿ ಮೂಕ ಜೀವಿಗಳಿಗೆ ಕುಡಿಯಲು ನೀರು ಒದಗಿಸುವ ಮೂಲಕ ಅವುಗಳ ರಕ್ಷಣೆಗೆ ವಿದ್ಯಾರ್ಥಿ ಸಮುದಾಯ ಸೇರಿದಂತೆ ಜನತೆ ಸಾಮೂಹಿಕ ಹೊಣೆಗಾರಿಕೆ ವಹಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ವತಿಯಿಂದ ದ.ಕ. ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಪ್ರಜಾ ಸೌಧದ ಆವರಣದಲ್ಲಿ ನಡೆದ ಜೀವ-ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ನೀರು ಮಿತವಾಗಿ ಬಳಸಿ-ಬೊಗಸೆ ನೀರು ಇಟ್ಟು ಏರುತ್ತಿರುವ ತಾಪಮಾನದಲ್ಲಿ ಪಶು ಪಕ್ಷಿಗಳ ಜೀವ ಉಳಿಸಿ ಧ್ಯೇಯದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ವಿದ್ಯಾರ್ಥಿಗಳಿಗೆ ನೀರಿನ ಕಿರು ತೊಟ್ಟಿಯನ್ನು ಜಿಲ್ಲಾಧಿಕಾರಿ ದರ್ಶನ್ ವಿತರಿಸಿದರು.ಅಪರ ಜಿಲ್ಲಾಧಿಕಾರಿ ರಾಜು, ರೋಟರಿ ೩೧೮೧ ಇದರ ನಿಯೋಜಿತ ಜಿಲ್ಲಾ ಗವರ್ನರ್ ಶೇಖರ್

ಬೋಳಾರ, ಅಸಿಸ್ಟೆಂಟ್ ಗವರ್ನರ್ ಚೆನ್ನಗಿರಿ ಗೌಡ, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್‌ನ ನಿರ್ದೇಶಕ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಕಟ ಪೂರ್ವ ಅಧ್ಯಕ್ಷ ಬ್ರಿಯಾನ್

ಪಿಂಟೊ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಡಾ.ಶಿವಪ್ರಸಾದ್ , ಪ್ರದೀಪ್ ಕುಲಾಲ್ ಇದ್ದರು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ ಅಧ್ಯಕ್ಷ ಭಾಸ್ಕರ ರೈ ಕಟ್ಟ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಯ ಆಡಳಿತದಲ್ಲಿ ರಾಜ್ಯ ಸುಭಿಕ್ಷವಾಗಲಿ
ಐದು ವರ್ಷ ತಂದೆಯೇ ರಾಜ್ಯ ಮುುನ್ನಡೆಸಲಿ