ಕನ್ನಡಪ್ರಭ ವಾರ್ತೆ ಸಿಂದಗಿ
ಪಟ್ಟಣದ ರಾಂಪುರ ರಸ್ತೆಯ ಕಾಲುವೆ ಬಳಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಐಬಿಎಸ್ ವಿಭಾಗ 02 ಇಂಡಿ ಏತ ನೀರಾವರಿ ಕಾಲುವೆಯ ವಿತರಣಾ ಕಾಲುವೆ ಸಂಖ್ಯೆ 31ಎ ಮೂಲಕ ಬಬಲೇಶ್ವರ ಕೆರೆಗೆ ₹1.30 ಕೋಟಿ ಮೊತ್ತದ ನೀರು ತುಂಬುವ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದರು.
ಈ ಕಾರ್ಯಕ್ಕೆ ಸಿಎಂ, ಡಿಸಿಎಂ ಸಹಕಾರವಿದೆ. ಮೋರಟಗಿ, ಹಂದಿಗನೂರ, ಪುರದಾಳ, ಆಲಮೇಲ, ಬಬಲೇಶ್ವರ ಹಾಗೂ ಯಂಕಂಚಿ ಗ್ರಾಮಗಳ ಕೆರೆಗಳ ಪುನರುತ್ಥಾನ ಹಾಗೂ ನೀರು ತುಂಬಿಸುವ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುವುದು. ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಪ್ರಾಮಾಣಿಕವಾಗಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು.ಮಾಜಿ ಶಾಸಕ ರಮೇಶ ಭೂಸನೂರ ಅವರು ಕೇಂದ್ರ ಸಚಿವ ನೀತಿನ ಗಡ್ಕರಿ ಅವರಿಂದ ಅನುದಾನ ತಂದಿದ್ದೇವೆ ಎಂದು ಸಾಕಷ್ಟು ಬಾರಿ ಹೇಳಿದ್ದಾರೆ. ಮಾಜಿ ಶಾಸಕರೇ ನಿಮ್ಮ ಅವಧಿಯಲ್ಲಿ ಆಲಮೇಲದಿಂದ ನಿಮ್ಮ ಸ್ವಗ್ರಾಮಕ್ಕೆ ಹೋಗುವ ಸುಸಜ್ಜಿತ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ. ಮೇಲಿಂದ ಮೇಲೆ ದೆಹಲಿಗೆ ಹೋಗಿ ದುಡ್ಡು ವ್ಯರ್ಥವೇಕೆ ಮಾಡುತ್ತೀರಿ? ಆ ಕೆಲಸವನ್ನು ಕರ್ನಾಟಕ ಸರ್ಕಾರದಲ್ಲಿಯೇ ಮಾಡಿಸಬಹುದು. ಈಗಾಗಲೇ 4 ಕಿಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನುಳಿದ ರಸ್ತೆಗೆ ಶೀಘ್ರ ಮಂಜೂರಾತಿ ತರಲಾಗುವುದು ಎಂದರು.
ಈ ಸಂದರ್ಭದಲ್ಲಿ ಭಾಗಪ್ಪಗೌಡ ಬಿರಾದಾರ, ರಾಚಯ್ಯ, ನಬಿಸಾಬ್, ದವಲತ ದೊಡಮನಿ, ಈರಣ್ಣ ನಾಯ್ಕೋಡಿ, ಶ್ರೀಶೈಲ ದೇಸಾಯಿ, ಗಂಗಾಧರ ಚಿಂಚೋಳ್ಳಿ, ಎಇಇ ಭಾಸ್ಕರ್, ಫಾರೂಕ್, ಜೈಭೀಮ ತಳಕೇರಿ, ಕುಮಾರ ವರ್ಕಾನಳ್ಳಿ, ಅನಿಲ ಪಾಟೀಲ, ಅನೀಲಗೌಡ ಪಾಟೀಲ, ಸಂತೋಷ ಪಾಟೀಲ, ಶರಣಗೌಡ ಪಾಟೀಲ, ಶರಣು ನಾಯ್ಕೋಡಿ, ಬಸವರಾಜ ಪಾಟೀಲ ಸೇರಿದಂತೆ ಹಲವರಿದ್ದರು.