ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಾಲಯದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಮತ್ತು ಹೇಮಾವತಿ ಯೋಜನೆಗಳ ಮೂಲಕ ಕೆರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದ್ದು, ತಾಂತ್ರಿಕ ಸಮಸ್ಯೆಗಳಿಂದ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಕೆರೆಗೆ ನೀರು ಹರಿಸಲಾಗುವುದು. ಅಲ್ಲಿಯವರೆಗೆ ರೈತರು ತಾಳ್ಮೆಯಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಾಗಲವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಹಾಗಲವಾಡಿ ಹಾಗೂ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ನೂರಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿ ಗಮನ ಸೆಳೆದರು.ತಹಸೀಲ್ದಾರ್ ಬಿ.ಆರತಿ ಮಾತನಾಡಿ, ಪ್ರಜಾ ಸೇವಾ ಅಭಿಯಾನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲೇ ಪರಿಹರಿಸಲು ಆದ್ಯತೆ ನೀಡಲಾಗುತ್ತಿದೆ. ವಿವಿಧ ಪಿಂಚಣಿಗಳಿಗೆ ಅರ್ಹರಾದ ಫಲಾನುಭವಿಗಳಿಗೆ ಕೆಲವೇ ಗಂಟೆಗಳಲ್ಲಿ ಆದೇಶದ ಪ್ರತಿ ವಿತರಿಸಲಾಗುತ್ತಿದೆ ಎಂದರು.