ಚಿಕ್ಕಮಗಳೂರುಕಡೂರು ತಾಲೂಕಿನ ಕೇದಿಗೆರೆಯಲ್ಲಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಾರ್ವಜನಿಕ ಸಮುದಾಯ ಭವನದ ಕಾಮಗಾರಿಗೆ ಶಾಸಕ ಕೆ.ಎಸ್.ಆನಂದ್ ಗುರುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸಾರ್ವಜನಿಕ ಸಮುದಾಯ ಭವನದ ಕಾಮಗಾರಿಗೆ ಭೂಮಿಪೂಜೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕಡೂರು ತಾಲೂಕಿನ ಕೇದಿಗೆರೆಯಲ್ಲಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಾರ್ವಜನಿಕ ಸಮುದಾಯ ಭವನದ ಕಾಮಗಾರಿಗೆ ಶಾಸಕ ಕೆ.ಎಸ್.ಆನಂದ್ ಗುರುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮುದಾಯ ಭವನ ನಿರ್ಮಾಣಕ್ಕೆ ಸದ್ಯ ₹15 ಲಕ್ಷ ಅನುದಾನ ಒದಗಿಸಲಾಗಿದೆ. ಉಳಿದ ಕಾಮಗಾರಿಗೆ ಅಗತ್ಯವಿರುವ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇನೆ. ಈ ಸಮುದಾಯ ಭವನ ಎಲ್ಲ ವರ್ಗದ ಜನರಿಗೂ ಸೇರಿದ್ದು, ಯಾರೋ ಕೆಲವರ ಚಿತಾವಣೆಯಿಂದ ಕಾಮಗಾರಿ ವಿಳಂಬವಾಗಬಾರದು. ಯಾವುದೇ ತೊಂದರೆಯಾಗದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.ಕಡೂರು ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ನೀರಾವರಿ ಯೋಜನೆಗಳಿಗೆ ಹಿಂದೆಂದೂ ಇಷ್ಟೊಂದು ಅನುದಾನ ಬಂದಿರ ಲಿಲ್ಲ. ಭದ್ರಾ ಉಪಕಣಿವೆ ಯೋಜನೆಯಡಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, 3ನೇ ಹಂತದ ಕಾಮ ಗಾರಿಗೂ ಚಾಲನೆ ನೀಡಲಾಗಿದೆ. ಈ ಭಾಗದ ಹಿರೇನಲ್ಲೂರು ಮತ್ತು ಮೇಲಿನಹಳ್ಳಿ ಕೆರೆಗಳಿಗೆ ಭದ್ರಾ ನೀರು ಹರಿಸಲು ಸತತ ಪ್ರಯತ್ನ ನಡೆಸಿದ್ದರ ಫಲವಾಗಿ ಇನ್ನೆರಡು ದಿನಗಳಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು. ಇದೇ ಸಂದರ್ಭ ದಲ್ಲಿ ಕೇದಿಗೆರೆಯ ಕಟ್ಟೆಗಳಿಗೂ ನೀರು ಹರಿಸಲಾಗುತ್ತದೆ ಎಂದರು.ಈ ಪ್ರಯತ್ನ ಯಶಸ್ವಿಯಾದರೆ ಈ ಭಾಗದ ರೈತರಿಗೆ ನೆಮ್ಮದಿ ಮತ್ತು ಸಮೃದ್ಧಿ ದೊರೆಯಲಿದೆ. ಇದಕ್ಕೆಲ್ಲ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿಯೇ ಕಾರಣ. ಜನರ ವಿಶ್ವಾಸ ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ. ವಿರೋಧಿ ಗಳ ಟೀಕೆಗೆ ಹೆದರಲ್ಲ. ಕ್ಷೇತ್ರದ ಅಭಿವೃದ್ಧಿಯೊಂದೇ ನನ್ನ ಗಮನ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ವಿವಿಧ ಬೇಡಿಕೆಗಳ ಪಟ್ಟಿಯನ್ನು ಕೇದಿಗೆರೆ ಗ್ರಾಮಸ್ಥರು ಶಾಸಕರಿಗೆ ಸಲ್ಲಿಸಿದರು.ಜಿಪಂ ನಾಮಿನಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ವಕೀಲ ಕೇದಿಗೆರೆ ಶಿವಕುಮಾರ್, ಶೇಖರಪ್ಪ, ಪುಟ್ಟಪ್ಪ ಹಾಗೂ ಕೆ.ಆರ್.ಐ.ಡಿ.ಎಲ್. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶ್ವಿನಿ ಉಪಸ್ಥಿತರಿದ್ದರು.
-- ಬಾಕ್ಸ್--ಭೂಮಿಪೂಜೆಗೆ ವಿರೋಧ: ಮೂವರು ಪೊಲೀಸ್ ವಶಕ್ಕೆಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯೊಬ್ಬರು ವಿರೋಧ ವ್ಯಕ್ತಪಡಿಸಿದರು. ಈ ಹಿಂದೆ ಇದೇ ಜಾಗದಲ್ಲಿ ವಾಲ್ಮೀಕಿ ಭವನ ನಿರ್ಮಿಸುವ ಪ್ರಯತ್ನಕ್ಕೂ ಕೆಲವರು ವಿರೋಧ ವ್ಯಕ್ತಪಡಿ ಸಿದ್ದರು. ಹೀಗಾಗಿ ಇಲ್ಲಿ ಸಮುದಾಯ ಭವನ ನಿರ್ಮಾಣಕ್ಕೂ ನಮ್ಮ ವಿರೋಧವಿದೆ. ನಮಗೆ ನ್ಯಾಯ ದೊರೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆಗೆ ಮುಂದಾದರು.ಈ ವೇಳೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಯಾವುದೇ ಅಡ್ಡಿಯಿಲ್ಲದೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.