ಮಲಪ್ರಭಾ ಜಲಾಶಯದಿಂದ ಮಾ.1ರವೆರೆಗೆ ನೀರು

KannadaprabhaNewsNetwork |  
Published : Feb 20, 2025, 12:47 AM IST
ಲಕ್ಷ್ಮೀ ಹೆಬ್ಬಾಳಕರ | Kannada Prabha

ಸಾರಾಂಶ

ಸವದತ್ತಿಯ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15 ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾ.1 ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸವದತ್ತಿಯ ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15 ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾ.1 ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕರಣೆ ನೀಡಿರುವ ಅವರು, ತಮ್ಮ ಅಧ್ಯಕ್ಷತೆಯಲ್ಲಿ ಅ.15 ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿ.ಎಂ.ಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿಎಂಸಿ ಹೀಗೆ ಒಟ್ಟಾರೆಯಾಗಿ 30.842 ಟಿ.ಎಂ.ಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ. ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮೂಲಕ ಫೆ.14ರವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾ.15ರವರೆಗೆ ಮುಂದುವರಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆ.15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾ.1ರವರೆಗೆ ನೀರಾವರಿ ಕಾಲುವೆಗಳ ಮೂಲಕ ಹರಿಸುವುದನ್ನು ಮುಂದುವರೆಸಲಾಗುವುದು. ಅಲ್ಲದೆ, ಅವಶ್ಯಕ ಕುಡಿಯುವ ನೀರಿಗಾಗಿ ಜೂನ್ ಅಂತ್ಯದವರೆಗೆ 15 ಟಿ.ಎಂ.ಸಿ ನೀರನ್ನು ಕಾಯ್ದಿರಿಸಿ ಒದಗಿಸಲು ಸೂಚಿಸಿದ್ದಾರೆ. ಮಾ.1ರೊಳಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕುಡಿಯುವ ನೀರಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದೂ ಸಚಿವರು ಸೂಚಿಸಿದ್ದಾರೆ.

ಪ್ರಸಕ್ತ ಬೇಸಿಗೆಯ ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಬೇಡಿಕೆ ಹೆಚ್ಚಾಗುವುದರಿಂದ ಹಿತ, ಮಿತವಾಗಿ ನೀರನ್ನು ಬಳಸುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ನವಿಲುತೀರ್ಥದ ಅಧೀಕ್ಷಕ ಅಭಿಯಂತರ ವಿ.ಎಸ್.ಮಧುಕರ ಮನವಿ ಮಾಡಿದ್ದಾರೆ. ಜೊತೆಗೆ, ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು