ಸಿದ್ದಗಂಗಾ ಮಠಕ್ಕೆ ನೀರು ಪೂರೈಸುವ ಕೆರೆಗೆ ನೀರು ಬಂದಿಲ್ಲ

KannadaprabhaNewsNetwork |  
Published : Sep 25, 2026, 01:15 AM IST
8888 | Kannada Prabha

ಸಾರಾಂಶ

ಇದೇ ರೀತಿ ತುಮಕೂರು ನಗರಕ್ಕೆ ನೀರು ಪೂರೈಸುವ ಹೆಬ್ಬಾಕ ಕೆರೆಗೂ ನೀರು ಹರಿದು ಬಂದಿಲ್ಲ. ಈಗಲೇ ಜಿಲ್ಲೆಯಲ್ಲಿ 34 ಡಿಗ್ರಿ ಸೆಲ್ಸಿಯಸ್‌ನಷ್ಟು ತೀವ್ರತಾಪಮಾನ ಇದ್ದು ಇದು ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಬರ ಪರಿಹಾರಕ್ಕೆ ಸಂಪುಟ ಉಪಸಮಿತಿ ರಚಿಸಿ: ಸುರೇಶ್‌ಗೌಡ ಆಗ್ರಹ

ಕನ್ನಡಪ್ರಭ ವಾರ್ತೆ, ತುಮಕೂರು

ಸಾವಿರಾರು ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ಶಿಕ್ಷಣ ಕೊಡುತ್ತಿರುವ ಸಿದ್ದಗಂಗಾ ಮಠಕ್ಕೆ ನೀರು ಪೂರೈಸುವ ಬುಗಡನಹಳ್ಳಿ ಕೆರೆಗೆ ಹೇಮಾವತಿ ನಾಲೆಯಿಂದ ಹರಿಸಿದ 5.5 ಟಿ.ಎಂ.ಸಿ ನೀರು ತಲುಪದೆ ಮಧ್ಯದಲ್ಲಿಯೇ ಗಾಯಬ್‌ ಆಗಿದೆ. ಮಠಕ್ಕೆ ನೀರಿನ ಸಮಸ್ಯೆ ಎದುರಾಗಿದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶಗೌಡರು ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದರು.

ರಾಜ್ಯದಲ್ಲಿ ಬಿದ್ದಿರುವ ಭೀಕರ ಬರಗಾಲ ಸ್ಥಿತಿ ಕುರಿತು ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದೇ ರೀತಿ ತುಮಕೂರು ನಗರಕ್ಕೆ ನೀರು ಪೂರೈಸುವ ಹೆಬ್ಬಾಕ ಕೆರೆಗೂ ನೀರು ಹರಿದು ಬಂದಿಲ್ಲ. ಈಗಲೇ ಜಿಲ್ಲೆಯಲ್ಲಿ 34 ಡಿಗ್ರಿ ಸೆಲ್ಸಿಯಸ್‌ನಷ್ಟು ತೀವ್ರತಾಪಮಾನ ಇದ್ದು ಇದು ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರವು ಸಮರೋಪಾದಿಯಲ್ಲಿ ಕುಡಿಯುವ ನೀರು ಪೂರೈಸುವ ಮತ್ತು ಬರಪರಿಹಾರ ಕಾಮಗಾರಿಗಳನ್ನು ತೆಗೆದುಕೊಂಡು ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಹಿಂದೆಯೂ ಬರ ಬಿದ್ದಿತ್ತು. ರಾಮಕೃಷ್ಣ ಹೆಗಡೆ, ಎಸ್.ಎಂ.ಕೃಷ್ಣ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೂ ತೀವ್ರ ಬರ ಸ್ಥಿತಿ ಎದುರಾಗಿತ್ತು. ಆಗ ಆಯಾ ಮುಖ್ಯಮಂತ್ರಿಗಳು ತೆಗೆದುಕೊಂಡ ಬರ ನಿರೋಧಕ ಕ್ರಮಗಳನ್ನು ಈ ಸರ್ಕಾರವೂ ಅನುಸರಿಸಬೇಕು. ಯಡಿಯೂರಪ್ಪನವರು ಖುದ್ದಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ, ಗೋಶಾಲೆಗಳಿಗೆ ಭೇಟಿ ನೀಡಿ ಜನ ಮತ್ತು ಜಾನುವಾರುಗಳ ರಕ್ಷಣೆ ಮಾಡಿದ್ದರು ಎಂದು ಸುರೇಶ್‌ಗೌಡ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸರವಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ
ಚಿಂಚೋಳಿ ಪಟ್ಟಣದಲ್ಲಿ ರಸ್ತೆ ದುರಸ್ತಿ ಮರೀಚಿಕೆ