ಕನ್ನಡಪ್ರಭ ವಾರ್ತೆ ಕೆಂಭಾವಿ
ಆದರೆ, 13 ಗ್ರಾಮಗಳನ್ನು ಒಳಗೊಂಡ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನವಾಗಿರುವ ಯಕ್ತಾಪೂರ ಗ್ರಾಮಕ್ಕೆ ಈ ನೀರಿನ ಸಮಸ್ಯೆ ಕಾಡುತ್ತಿದ್ದು, ಲಕ್ಷ ಲಕ್ಷ ಹಣ ಖರ್ಚು ಮಾಡಿ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದ್ದರೂ ಒಂದು ಹನಿ ನೀರು ಮಾತ್ರ ಬಾರದೆ ಇರುವುದು ಗ್ರಾಮಸ್ಥರಿಗೆ ಬೇಸರ ಮೂಡಿಸಿದೆ. ಜನತೆಗೆ ಕಳೆದ ಹತ್ತು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದೆ ನಿತ್ಯವೂ ಪರದಾಡುವ ಪರಿಸ್ಥಿ ತಿ ಮುಂದುವರೆದಿದೆ. ಗ್ರಾಮಕ್ಕೆ ಸರಬರಾಜು ಆಗುವ ಬಾವಿಯ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಜನತೆ ನೀರಿಗಾಗಿ ಪರಿತಪಿಸುವಂತಾಗಿದೆ.
ಕಳೆದ ದಶಕಗಳಿಂದ ಗ್ರಾಮಕ್ಕೆ ಕುಡಿಯುವ ನೀರೇ ಶಾಪವಾಗಿದೆ ಎನ್ನುತ್ತಾರೆ ಗ್ರಾಮಸ್ಥರು. ಇದ್ದ ಒಂದು ಬಾವಿಯೂ ಬತ್ತಿಹೋಗುವ ಸ್ಥಿತಿ ತಲುಪಿದ್ದು, ಶಾಶ್ವತ ಪರಿಹಾರವಿಲ್ಲದೆ ಜನ ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿ ಹೊಂದಿರುವ ಈ ಗ್ರಾಮದಲ್ಲಿ ಮೂರು ಜನ ಸದಸ್ಯರನ್ನು ಹೊಂದಿದೆ. ಒಂದು ಸಾವೀರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಒಂದು ಸೇದು ಬಾವಿಯಿದ್ದು ಅದು ದಿನಬಳಕೆಗೆ ಮಾತ್ರ ಉಪಯೋಗಕ್ಕಿದ್ದು ಕುಡಿಯಲು ಯೋಗ್ಯವಾಗಿಲ್ಲ ಎನ್ನುತ್ತಾರೆ ಶಿವಶಂಕರ ಹೊಸಮನಿ.ಕಳೆದ ಕೆಲ ತಿಂಗಳ ಹಿಂದಷ್ಟೆ ಕ್ಷೇತ್ರದ ಶಾಸಕರ ಅನುದಾನದಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆಯಡಿ ಚಿಂಚೋಳಿ ಗ್ರಾಮದಿಂದ ಪೈಪ್ ಲೈನ್ ಮಾಡಲಾಗಿತ್ತು. ಬಹುತೇಕ ಕಾಮಗಾರಿ ಮುಗಿದೆ ಎಂದು ಹೇಳಲಾಗುತ್ತಿದ್ದು ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂಬುದು ಗ್ರಾಮಸ್ಥರು ಆರೋಪವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಮರಿಚೆಕೆಯಾಗಿದ್ದು ಸೇದು ಬಾವಿಯ ನೀರೆ ಕುಡಿಯುವಂತಾಗಿದೆ.
ಜಿಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎಚ್. ಡಿ.ಪಾಟೀಲ ಮಾತನಾಡಿ, ಮಳೆ ಬಾರದ ಕಾರಣ ಮುಖ್ಯವಾಗಿ ಅಂತರ್ಜಲ ಮಟ್ಟ ತೀವ್ರ ಕುಸಿದಿದೆ. ಚಿಂಚೋಳಿ ಗ್ರಾಮದ ಬಳಿ ಎರಡು ಕೊಳವೆ ಬಾವಿ ಕೊರೆಸಿದ್ದು, ಯಕ್ತಾಪೂರ ಗ್ರಾಮಕ್ಕೆ ಈಗಾಗಲೇ ಪೈಪ್‌ಲೈನ್ ಕಾಮಗಾರಿಯೂ ಪೂರ್ಣಗೊಂಡಿದೆ. ಕೆಲವು ಸಣ್ಣಪುಟ್ಟ ಕೆಲಸಗಳು ಬಾಕಿ ಇದ್ದು ಶೀಘ್ರದಲ್ಲೆ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.