ನಾರಾಯಣಪೂರ ಜಲಾಶಯದಿಂದ ಭೀಮಾ ನದಿಗೆ ನೀರು

KannadaprabhaNewsNetwork |  
Published : Jul 22, 2026, 01:30 AM IST
ಫೋಟೋ-ಭೀಮಾ | Kannada Prabha

ಸಾರಾಂಶ

Water released from Narayanapura Reservoir into the Bhima River.

ಸರ್ಕಾರದ ಮಹತ್ವದ ನಿರ್ಧಾರ

-----

-ಭೀಮಾ ನದಿ ತೀರದಲ್ಲಿ ಕುಡಿಯುವ ನೀರಿನ ಅಭಾವ ನಿವಾರಣೆಗೆ ತುರ್ತು ಕ್ರಮ: ಡಾ. ಅಜಯ್‌ ಸಿಂಗ್‌

----

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲೆಯ ಅಫಜಲಪೂರ, ಜೇವರ್ಗಿ ಮತ್ತು ಯಡ್ರಾಮಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಕೊರತೆಯಿಂದಾಗಿ ಕಳೆದ 3, 4 ತಿಂಗಳಿಂದ ತಲೆದೋರಿರುವ ತೀವ್ರ ಕುಡಿಯುವ ನೀರಿನ ಅಭಾವವನ್ನು ನಿವಾರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಭಾಗದ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ದಿನಂಪ್ರತಿ 300 ಕ್ಯೂಸೆಕ್ಸ್ ನೀರು ಹರಿವು: ಕಲಬುರಗಿ ಜಿಲ್ಲಾಧಿಕಾರಿಗಳ ಪ್ರಸ್ತಾವನೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಮುಖ್ಯ ಅಭಿಯಂತರರ ತಾಂತ್ರಿಕ ಅಭಿಪ್ರಾಯದ ವರದಿಯನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ನಾರಾಯಣಪೂರ ಜಲಾಶಯದಿಂದ ಇಂಡಿ ಶಾಖಾ ಕಾಲುವೆಯ (IBC) ಎಸ್ಕೆಪ್ 34.10 ಕಿ.ಮೀ ಮತ್ತು 50.00 ಕಿ.ಮೀ ಮುಖಾಂತರ ಒಟ್ಟು 1.20 ಟಿ.ಎಂ.ಸಿ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಜುಲೈ 18 ರಿಂದ ಜಾರಿಗೆ ಬರುವಂತೆ ದಿನಂಪ್ರತಿ 300 ಕ್ಯೂಸೆಕ್‌ನಂತೆ ಈ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಬಿಡುಗಡೆ ಮಾಡಲಾದ ಈ ಕುಡಿಯುವ ನೀರು ಎಲ್ಲೂ ಪೋಲಾಗದಂತೆ ಮತ್ತು ಸುರಕ್ಷಿತವಾಗಿ ಗೊತ್ತುಪಡಿಸಿದ ಸ್ಥಳಕ್ಕೆ ತಲುಪುವಂತೆ ಸೂಕ್ತ ಮುಂಜಾಗೃತಾ ಮತ್ತು ಮೇಲುಸ್ತುವಾರಿ ಕ್ರಮಗಳನ್ನು ವಹಿಸಲು ಕಲಬುರಗಿ, ಯಾದಗಿರಿ ಹಾಗೂ ವಿಜಯಪೂರ ಜಿಲ್ಲಾಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಪೊಲೀಸ್ ಭದ್ರತೆ: ಕುಡಿಯುವ ನೀರಿಗಾಗಿ ಮೀಸಲಾಗಿಟ್ಟಿರುವ ಈ ನೀರನ್ನು ಕೃಷಿ ಅಥವಾ ಕೈಗಾರಿಕೆಗೆ ಇತರೆ ಯಾವುದೇ ಬೇರೆ ಉದ್ದೇಶಗಳಿಗೆ ಬಳಸದಂತೆ ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ನೀರಿನ ಸುರಕ್ಷತೆ ಹಾಗೂ ಸುಗಮ ಹರಿವಿಗಾಗಿ ನದಿಯ ಉದ್ದಕ್ಕೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಕಲಬುರಗಿ, ಯಾದಗಿರಿ ಮತ್ತು ವಿಜಯಪೂರ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕೃಷ್ಣಾ ಭಾಗ್ಯ ಜಲ ನಿಗಮದ ನಾರಾಯಣಪೂರ ಹಾಗೂ ಭೀಮರಾಯನಗುಡಿಯ ಮುಖ್ಯ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

ನೀರು ಬಿಡುಗಡೆಯಾಗಿರುವುದರಿಂದ ಜೇವರ್ಗಿ, ಅಫಜಲಪುರ ಮತ್ತು ಯಡ್ರಾಮಿ ತಾಲೂಕಿನ ಹಾಗೂ ಈ ಭಾಗದ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಸದ್ಯದಲ್ಲೇ ಬಗೆಹರಿಯಲಿದ್ದು, ಜನತೆಯಲ್ಲಿ ನೆಮ್ಮದಿ ತಂದಿದೆ ಎಂದು ಡಾ. ಅಜಯ್‌ ಧರ್ಮಸಿಂಗ್‌ ಹೇಳಿದ್ದಾರೆ.

ಸಾರ್ವಜನಿಕರ ಈ ಪ್ರಮುಖ ಬೇಡಿಕೆಯನ್ನು ಈಡೇರಿಸಲು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ, ಕಲಬುರಗಿ ವಿಭಾಗದ ಆಯುಕ್ತರು, ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ನಾರಾಯಣಪುರ ಜಲಾಶಯದ ಮುಖ್ಯ ಇಂಜಿನಿಯರ್ ಅವರಿಗೆ ಶಾಸಕ ಅಜಯ್ ಧರ್ಮಸಿಂಗ್ ಅವರು ಧನ್ಯವಾದ ಸಮರ್ಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆ ಮನೆಗೆ ತೆರಳಿ ಎಸ್‌ಐಆರ್ ಅಭಿಯಾನ: ಶಾಸಕ ಎಚ್. ಕೆ. ಸುರೇಶ್
ಮಾಸಾಶನ ಸ್ಥಗಿತ ಸರಿಯಲ್ಲ: ಮಾಡಾಳು ಮಲ್ಲಿಕಾರ್ಜುನ್