ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ ಅರಸೀಕೆರೆತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ ಹೇಳಿದರು.
ನಗರದ ಕಸ್ತೂರ ಭಾ ಶಿಭಿರದಲ್ಲಿ ಆಯೋಜಿಸಿದ ಜಿಲ್ಲಾ ಪಂಚಾಯತ್ ಹಾಸನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅರಸೀಕೆರೆ ಕ್ಷೇತ್ರದ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.ಜೆಜೆಎಂ ಅನುಷ್ಠಾನದಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದ್ದು ಇದರ ಸದ್ಬಳಕೆ ಮತ್ತು ನಿರ್ವಹಣೆಯ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಒತ್ತು ನೀಡಬೇಕು ಎಂದು ಹೇಳಿದರು.
ರಾಜ್ಯ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಜೆಜೆಎಂ ಅನುಷ್ಠಾನದ ಕಾಮಗಾರಿಗಳ ಬಗ್ಗೆ ಕಂಟ್ರ್ಯಾಕ್ಟರ್‌ಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿ ಹಣ ಬಿಡುಗಡೆ ಮಾಡಿಸುತ್ತೇನೆ. ಪಿಡಿಒ ಅಧಿಕಾರಿಗಳಿಗೂ ಜೆಜೆಎಂಗೂ ಸಂಬಂಧವಿದ್ದು ಗ್ರಾಮೀಣ ಭಾಗಗಳಲ್ಲಿ ನೀರು ಪೂರೈಕೆಯಾಗುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ನೀರನ್ನು ಒದಗಿಸುವ ಜವಾಬ್ದಾರಿ ನಮ್ಮದು ಅದನ್ನು ಸರಿಯಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.ಸಭೆಯಲ್ಲಿ ಪೈಪ್‌ಲೈನ್ ದುರಸ್ತಿ ಕಾರ್ಯ, ಟ್ಯಾಂಕರ್‌ಗಳ ಸೋರಿಕೆ, ಕಡಿಮೆ ಪ್ರಮಾಣದ ನೀರು, ಜೆಜೆಎಂ ಉಪಕರಣಗಳು, ಇನ್ನಿತರ ಸಮಸ್ಯೆಗಳ ಬಗ್ಗೆ ಪ್ರಸ್ಥಾಪವಾದವು. ಪ್ರತಿ ಗ್ರಾಮ ಪಂಚಾಯಿತಿ ಪಿಡಿಒಗಳು, ಅಧ್ಯಕ್ಷರು, ಸದಸ್ಯರು ವಾಟರ್ಮೆನ್‌ಗಳನ್ನು ತರಾಟೆಗೆ ತೆಗೆದುಕೊಂಡರು. ಜಲಜೀವನ್ ಮಿಷನ್ ಉತ್ತಮ ಯೋಜನೆಯಾಗಿದ್ದು ಗ್ರಾಮೀಣ ಭಾಗದ ಜನರಿಗೆ ಅನೂಕೂಲವಾಗಲಿದೆ. ಜೆಜೆಎಂ ಸಮಸ್ಯೆಗಳನ್ನು ಗ್ರಾಮಸ್ಥರು ನಮ್ಮ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಅಭಿಯಂತರರು ವೀರಪ್ಪ, ಕಾರ್ಯನಿರ್ವಹಕ ಅಭಿಯಂತರ ನವ್ಯಶ್ರೀ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಉಮೇಶ್, ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯ ಅಧ್ಯಕ್ಷರು, ಪಿಡಿಒಗಳು, ಉಪಾದ್ಯಕ್ಷರು, ಸದಸ್ಯರು, ಗುತ್ತಿಗೆದಾರರು, ನೀರುಗಂಟೆಗಾರರು ಇದ್ದರು.