ಜಲಪಾತ ಕಣ್ತುಂಬಿಕೊಳ್ಳಲು ಹರಿದು ಬರುತ್ತಿರುವ ಪ್ರವಾಸಿಗರು ದಂಡು । ಕಾವೇರಿಗೆ 1 ಲಕ್ಷ ಕ್ಯುಸೆಕ್ ನೀರು
ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ಹಾಗೂ ಕೆಆರ್‌ಎಸ್ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿಗೆ ೧ ಲಕ್ಷ ಕ್ಯುಸೆಕ್ಸ್‌ನಷ್ಟು ನೀರು ಬಿಟ್ಟಿರುವುದರಿಂದ ಭರಚುಕ್ಕಿ ಜಲಪಾತಕ್ಕೆ ಹೆಚ್ಚು ನೀರು ಬರುತ್ತಿದೆ. ಇದರಿಂದ ಜಲಪಾತ ತನ್ನ ವೈಭವವನ್ನು ಹೆಚ್ಚಿಸಿಕೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕಳೆದ ವರ್ಷ ಮಳೆ ಇಲ್ಲದೆ ಜಲಪಾತ ಬಣಗುಟ್ಟುತ್ತಿದ್ದುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು,ಮಳೆಯ ನಡುವೆಯು ವೀಕ್ಷಣೆ:
ಜಲಪಾತ ವೀಕ್ಷಣೆಗೆ ಸಾವಿರಾರು ಜನರು ಬೈಕ್, ಕಾರು, ಬಸ್, ಮಿನಿ ಬಸ್, ಆಟೋಗಳಲ್ಲಿ ಹೆಚ್ಚಾಗಿ ಬರುತ್ತಿದ್ದಾರೆ. ಪ್ರಯಾಣಿಕರು ಮಳೆ ಬಂದರೆ ಪರದಾಡುವ ಸ್ಥಿತಿ ಇದ್ದು ಇನ್ನಾದರೂ ನೆರಳಿನ ವ್ಯವಸ್ಥೆ ಮಾಡಬೇಕು ಎಂಬುದು ಪ್ರವಾಸಿಗರ ಒತ್ತಾಯವಾಗಿದೆ. ತಮಿಳುನಾಡಿನ ದಾಹ ತಣಿಸಿದ ಕಾವೇರಿ!
ಜು.16 ರಂದು 43 ಅಡಿಯಿದ್ದ ಮೆಟ್ಟೂರು ಜಲಾಶಯದ ನೀರಿನ ಮಟ್ಟ ಜು.21ರಂದು 68 ಅಡಿಗೆ ತಲುಪಿದೆ. ಆರೇ ದಿನದಲ್ಲಿ ಮೆಟ್ಟೂರು ಜಲಾಶಯದ ನೀರಿನ ಮಟ್ಟ 25 ಅಡಿ ಹೆಚ್ಚಳವಾಗಿದೆ.