ಪುಟ..2ಕ್ಕೆ ಕಟ್‌ ಲೀಡ್ಮೂರು ವರ್ಷವಾದರೂ ಮುಗಿಯದ ಜಲಧಾರೆ

KannadaprabhaNewsNetwork |  
Published : Oct 01, 2026, 03:00 AM IST
ವೀರೇಶ್ವರ ವೃತ್ತದ ಬಳಿ ಕಾಮಗಾರಿ ಸ್ಥಗಿತಗೊಂಡಿರುವುದು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ನಾಲತವಾಡ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕು ಜನರಿಗೆ ನಿರಂತರ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಜಲಧಾರೆ ಹಾಗೂ ಹರ್‌ ಘರ್‌ ಜಲ್‌ ಯೋಜನೆ ಕಾಮಗಾರಿ ಮೂರು ವರ್ಷಗಳಿಂದ ನಡೆಯುತ್ತಿದೆ. ಆದರೆ ಇನ್ನೂ ಪೂರ್ಣಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಗುತ್ತಿಗೆ ಪಡೆದಿರುವ ಜಿವಿಪಿಆರ್ ಕಂಪನಿಯ ನಿಧಾನಗತಿಯ ಕಾಮಗಾರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯೂನೂಸ್‌ ಮೂಲಿಮನಿ

ಕನ್ನಡಪ್ರಭ ವಾರ್ತೆ ನಾಲತವಾಡ

ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕು ಜನರಿಗೆ ನಿರಂತರ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಜಲಧಾರೆ ಹಾಗೂ ಹರ್‌ ಘರ್‌ ಜಲ್‌ ಯೋಜನೆ ಕಾಮಗಾರಿ ಮೂರು ವರ್ಷಗಳಿಂದ ನಡೆಯುತ್ತಿದೆ. ಆದರೆ ಇನ್ನೂ ಪೂರ್ಣಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಗುತ್ತಿಗೆ ಪಡೆದಿರುವ ಜಿವಿಪಿಆರ್ ಕಂಪನಿಯ ನಿಧಾನಗತಿಯ ಕಾಮಗಾರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ನದಿಯಿಂದ ನೀರು ತಂದು ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪೂರೈಸುವ ಉದ್ದೇಶದಿಂದ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೃಷ್ಣಾ ನದಿಯಿಂದ ನಾಲತವಾಡ ಸಮೀಪದವರೆಗೆ ಕಾಮಗಾರಿ ನಡೆದಿದ್ದು, ವೀರೇಶ್ವರ ವೃತ್ತದ ಬಳಿ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕಳೆದ ಎರಡು ತಿಂಗಳಿಂದ ಕಾಮಗಾರಿ ಮತ್ತೆ ಆರಂಭವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದ ಕೆಲವೆಡೆ ರಸ್ತೆ ಅಗೆದು ಪೈಪ್‌ಲೈನ್ ಅಳವಡಿಸಿದ್ದರೆ, ಇನ್ನೂ ಕೆಲವೆಡೆ ರಸ್ತೆ ಮೇಲ್ಭಾಗದಲ್ಲಿಯೇ ಪೈಪ್‌ಗಳ ಜೋಡಣೆ ಮಾಡಲಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗುವುದರ ಜತೆಗೆ ಕಾಮಗಾರಿ ಪೂರ್ಣಗೊಂಡ ಬಳಿಕ ಅಗೆದ ರಸ್ತೆಗಳ ಪುನರ್‌ನಿರ್ಮಾಣ ಯಾವಾಗ ಎಂಬ ಪ್ರಶ್ನೆಯೂ ಎದುರಾಗಿದೆ.

ಯೋಜನೆಯ ಕಾಮಗಾರಿಗೆ ರೈತರು ಹಾಗೂ ಗ್ರಾಮಸ್ಥರು ಸಹಕಾರ ನೀಡಿದ್ದು, ಪಟ್ಟಣ ಪಂಚಾಯಿತಿಯಿಂದಲೂ ಅಗತ್ಯ ಸಹಕಾರ ಒದಗಿಸಲಾಗಿದೆ. ಆದರೂ ಗುತ್ತಿಗೆದಾರ ಸಂಸ್ಥೆ ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವರ್ಷ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯಂತೆ ಈಗಲೇ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಇಂತಹ ಸಂದರ್ಭದಲ್ಲಿ ನಿರಂತರ ನೀರು ಪೂರೈಸುವ ಯೋಜನೆಯ ಕಾಮಗಾರಿ ವೇಗ ಪಡೆಯುವುದು ಬಿಟ್ಟು ಕೆಲಸ ಸ್ಥಗಿತಗೊಂಡಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರೂ ಸ್ಥಳದಲ್ಲಿ ನಿರೀಕ್ಷಿತ ವೇಗ ಕಂಡುಬರುತ್ತಿಲ್ಲ. ಹೀಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನಿಗದಿಪಡಿಸಿ ಕೆಲಸ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

------

ಕೋಟ್‌

ಕಳೆದ ಮೂರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಪೂರ್ಣಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಜನರಿಗೆ ನಿರಂತರ ನೀರು ಪೂರೈಸಲು ಪಟ್ಟಣ ಪಂಚಾಯಿತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗಿದೆ. ಆದರೆ ವೀರೇಶ್ವರ ವೃತ್ತದ ಬಳಿ ಕಾಮಗಾರಿ ನಿಲ್ಲಿಸಲಾಗಿದೆ. ಬರ ಪರಿಸ್ಥಿತಿ ಇರುವ ಹಿನ್ನೆಲೆ ಗುತ್ತಿಗೆದಾರರು ಕೂಡಲೇ ಕಾಮಗಾರಿ ಆರಂಭಿಸಿ ಶೀಘ್ರ ಪೂರ್ಣಗೊಳಿಸಬೇಕು.

-ಬಾಬು ಕ್ಷತ್ರಿ ಪಪಂ ಸದಸ್ಯ

--

ಕೋಟ್‌

ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಕರೆಸಿ ಡಿಸೆಂಬರ್ ಒಳಗೆ ಕಾಮಗಾರಿ ಮುಗಿಸಿ ನೀರು ಹರಿಸುವಂತೆ ತಿಳಿಸಿದ್ದೇವೆ. ಇನ್ನೂ ಅನೇಕ ಕಡೆ ಕಾಮಗಾರಿ ಬಾಕಿ ಉಳಿದುಕೊಂಡಿದೆ. ಶೀಘ್ರದಲ್ಲೇ ಮುಗಿಸಬೇಕು ಎಂದು ಆಡಳಿತ ಸದಸ್ಯರು ಹೇಳಿದ್ದಾರೆ.

-ಪ್ರಶಾಂತ ಸಿ. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾಸೋಹ ಪ್ರೀತಿ, ಸಹಬಾಳ್ವೆ ಬೆಳೆಸುವ ಸಾಧನ
ರೈತರಿಗೆ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ