ಕನ್ನಡಪ್ರಭ ವಾರ್ತೆ ಮಂಡ್ಯ
ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್.ಕುಮಾರ್ ನೇತೃತ್ವದಲ್ಲಿ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಜೆ.ಸಿ.ವೃತ್ತದವರೆಗೂ ಪಟಾಪಟ್ಟಿ ಚಡ್ಡಿ ಧರಿಸಿಕೊಂಡು, ಬಾರುಕೋಲು ಬೀಸುತ್ತಾ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸುವಂತೆ ಘೋಷಣೆ ಕೂಗಿದರು.
ರಾಜ್ಯ ಸರ್ಕಾರ ನೀರು ಹರಿಸುವುದಿಲ್ಲವೆಂದು ಹೇಳಿ ನಿರಂತರವಾಗಿ ನೀರು ಹರಿಸುತ್ತಿದೆ. ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಇದೇ ರೀತಿ ನೀರು ಹರಿಸಿದರೆ ಕೆಆರ್‌ಎಸ್ ಅಣೆಕಟ್ಟೆ ಬರಿದಾಗುತ್ತದೆ. ನೀರು ಹರಿಸಲ್ಲ ಎಂದು ನೀರು ಬಿಟ್ಟು ಜನರನ್ನು ದಾರಿ ತಪ್ಪಿಸುತ್ತಿರುವ ಸರ್ಕಾರದ ನಡೆ ಖಂಡನೀಯವಾಗಿದೆ ಎಂದು ಕಿಡಿಕಾರಿದರು.ತಮಿಳುನಾಡು ಮುಖ್ಯಮಂತ್ರಿ ವಿಜಯ್ ಹಾಗೂ ಸ್ಟ್ಯಾಲಿನ್ ಓಲೈಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಯಾವುದೇ ಸರ್ಕಾರ ಬರಲಿ, ಮೊದಲು ತಮಿಳುನಾಡಿಗೆ ನೀರು ಹರಿಸುತ್ತದೆ. ಇದು ಯಾವ ನ್ಯಾಯ? ನಮ್ಮ ಜಿಲ್ಲೆಯ ಸಂಸದ ಮತ್ತು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಕಾವೇರಿ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಉಸ್ತುವಾರಿ ಸಚಿವರು ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಶೋಭಾ, ಸೌಭಾಗ್ಯ, ರವಿ, ನಾಗೇಂದ್ರ ಭಾಗವಹಿಸಿದ್ದರು.