ನೀರಿನ ಮೂಲ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು

KannadaprabhaNewsNetwork |  
Published : May 09, 2024, 01:00 AM IST
ಫೋಟೋ: 7 ಹೆಚ್‌ಎಸ್‌ಕೆ 2ಹೊಸಕೋಟೆ ತಾಲೂಕಿನ ಚೊಕ್ಕಹಳ್ಳಿ ಗ್ರಾಪಂ ವತಿಯಿಂದ ಸ್ವಚ್ಚ ಸರ್ವೇಕ್ಷಣಾ ಅಭಿಯಾನದ ಪ್ರಯುಕ್ತ ಪಿಡಿಓ ಮಹೇಶ್ ನೇತೃತ್ವದಲ್ಲಿ ಕಲ್ಯಾಣಿ ಸ್ವಚ್ಚತೆ ಕಾರ್ಯವನ್ನು ಮಾಡಲಾಯಿತು. | Kannada Prabha

ಸಾರಾಂಶ

ಹೊಸಕೋಟೆ: ನೀರಿನ ಸೆಲೆಗಳನ್ನು ಉಳಿಸುವ ದೃಷ್ಟಿಯಿಂದ ಗ್ರಾಮಗಳಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ತಿಳಿಸಿದರು.

ಹೊಸಕೋಟೆ: ನೀರಿನ ಸೆಲೆಗಳನ್ನು ಉಳಿಸುವ ದೃಷ್ಟಿಯಿಂದ ಗ್ರಾಮಗಳಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಚೊಕ್ಕಹಳ್ಳಿ ಗ್ರಾಪಂನಲ್ಲಿ ಕಲ್ಯಾಣಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರನ್ನು ಸಂಗ್ರಹಿಸುವ ಕಲ್ಯಾಣಿಗಳು, ಕೆರೆ ಕುಂಟೆಗಳು ಸೇರಿದಂತೆ ನೀರಿನ ಸೆಲೆಗಳಲ್ಲಿ ಕಸ ಕಡ್ಡಿ, ಪ್ಲಾಸ್ಟಿಕ್ ಸುರಿದು ಹಾಳುಗೆಡವಬಾರದು. ಆದರೆ ನೀರಿನ ಸೆಲೆಗಳನ್ನು ಸಂರಕ್ಷಿಸುವ ಅತಿ ದೊಡ್ಡ ಜವಾಬ್ದಾರಿ ಇಂದಿನ ಯುವ ಪೀಳಿಗೆ ಮೇಲಿದೆ. ಆದ್ದರಿಂದಲೆ ಗ್ರಾಪಂ ಸಿಬ್ಬಂದಿಯೊಂದಿಗೆ ಕಲ್ಯಾಣಿ ಸ್ವಚ್ಛತೆ ಮಾಡಲಾಗುತ್ತಿದೆ. ಇನ್ನು ಮುಂದೆ ಪ್ರತಿ ತಿಂಗಳ ಪ್ರಥಮ ಶನಿವಾರದಂದು ಗ್ರಾಮಗಳ ಸ್ವಚ್ಛತೆಗಾಗಿ ಒಂದು ದಿನವನ್ನು ಗ್ರಾಪಂ ಸಿಬ್ಬಂದಿ ಮೀಸಲಿರಿಸಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಿಬ್ಬಂದಿ ಕೈಜೋಡಿಸಬೇಕು. ಗ್ರಾಮಗಳ ಸ್ವಚ್ಛತೆಗಾಗಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.

ಗ್ರಾಪಂ ಕಾರ್ಯದರ್ಶಿ ನಾಗರಾಜ್ ಮಾತನಾಡಿ, ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿದ್ದರೂ ಸಾರ್ವಜನಿಕರಲ್ಲಿ ಅರಿವಿನ ಕೊರತೆ ಎದ್ದು ಕಾಣುತ್ತಿದೆ. ಆದ್ದರಿಂದ ಪ್ರತಿ ಮನೆ ಮನಗಳಿಂದ ಪರಿಸರದ ಸ್ವಚ್ಛತೆ ಆಗಬೇಕು. ಆಗ ಮಾತ್ರ ಗ್ರಾಮ ನೈರ್ಮಲ್ಯ ಸಾಕಾರವಾಗುತ್ತದೆ ಎಂದರು.

ಚೊಕ್ಕಹಳ್ಳಿ ಗ್ರಾಮದ ಕಲ್ಯಾಣಿ ಸ್ವಚ್ಛತಾ ಅಭಿಯಾನದಲ್ಲಿ ಗ್ರಾಪಂ ಸಿಬ್ಬಂದಿ, ಲೆಕ್ಕ ಸಹಾಯಕ ಶ್ರೀನಿವಾಸ್ ಇತರರಿದ್ದರು.ಫೋಟೋ: 7 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ಚೊಕ್ಕಹಳ್ಳಿ ಗ್ರಾಪಂ ವತಿಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಪ್ರಯುಕ್ತ ಪಿಡಿಒ ಮಹೇಶ್ ನೇತೃತ್ವದಲ್ಲಿ ಕಲ್ಯಾಣಿ ಸ್ವಚ್ಛತಾ ಕಾರ್ಯ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!