‘ಕರ್ನಾಟಕಕ್ಕಾಗಿ ನಾವು’ ಬೈಕ್ ಜಾಥಾ

KannadaprabhaNewsNetwork |  
Published : Feb 28, 2024, 02:34 AM IST
27ಕೆಪಿಆರ್‌ಸಿಆರ್‌02:  | Kannada Prabha

ಸಾರಾಂಶ

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಜನರು ತಿರಸ್ಕರಿಸಿ, ಸ್ವಚ್ಛ, ಪ್ರಾಮಾಣಿಕ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು

ರಾಯಚೂರು/ಸಿಂಧನೂರು/ಮಸ್ಕಿ: ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಜನರು ತಿರಸ್ಕರಿಸಿ, ಸ್ವಚ್ಛ, ಪ್ರಾಮಾಣಿಕ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು ಎಂದು ಕೆಆರ್‌ಎಸ್‌ಗೆ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮನವಿ ಮಾಡಿದರು.

ಪಕ್ಷದಿಂದ ಹಮ್ಮಿಕೊಂಡಿರುವ ‘ಕರ್ನಾಟಕಕ್ಕಾಗಿ ನಾವು’ ಬೈಕ್ ಜಾಥಾ ರಾಯಚೂರು, ಸಿಂಧನೂರು ನಗರ ಹಾಗೂ ಮಸ್ಕಿ ಪಟ್ಟಣಕ್ಕೆ ಮಂಗಳವಾರ ಆಗಮಿಸಿದ ಹಿನ್ನೆಲೆಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿ, ಜನರಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಸಲುವಾಗಿ ಫೆ.19ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಪ್ರಾರಂಭವಾದ ಬೈಕ್ ಜಾಥಾ 9 ದಿನಗಳಲ್ಲಿ 20 ಜಿಲ್ಲೆಗಳಲ್ಲಿ ಸಂಚರಿಸಿ, ರಾಯಚೂರು ಮಾರ್ಗವಾಗಿ ಸಿಂಧನೂರಿಗೆ ಬಂದಿದೆ. ಮಾ.2 ರಂದು ಬೆಂಗಳೂರಿನ ನೆಲಮಂಗಲದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಕೋರಿದರು.

ರಾಜ್ಯ ಘಟಕದ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿದರು. ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್, ಕಾರ್ಯದರ್ಶಿ ನರಸಿಂಹ ಮೂರ್ತಿ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿಗಳಾದ ಎಲ್.ಜೀವನ್, ಚಂದ್ರಶೇಖರ್ ಮಠದ, ಬಿ.ಜಿ.ಕುಂಬಾರ್, ರಾಜ್ಯ ಯುವ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ, ಜಿಲ್ಲಾ ಘಟಕದ ಅಧ್ಯಕ್ಷ ಕುಂದೂರು ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಬಸವಪ್ರಭು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು