)
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೇವಿನಮಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳುಗಳನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಸಾಲ ಮಾಡಿದೆ ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಆರ್ಥಿಕ ನಿರ್ವಹಣೆ ಕಾಯ್ದೆಯ ಮಾನದಂಡ ಮೀರಿ ನಾವು ಸಾಲ ಮಾಡಿಲ್ಲ. ಈ ಸತ್ಯವನ್ನು ಬಿಜೆಪಿ ಹೇಳುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬರಲಿಲ್ಲ. ಜೊತೆಗೆ ಜಿಎಸ್‌ಟಿ ಮೂಲಕ ನಮಗೆ ಬರಬೇಕಿದ್ದ ತೆರಿಗೆ ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ ₹10000 ಕೋಟಿ ಕಡಿಮೆಯಾಯಿತು. ಆದರೂ ನಾವು ಗ್ಯಾರಂಟಿ ಯೋಜನೆ ನಿಲ್ಲಿಸಲಿಲ್ಲ. ಜೊತೆಗೆ ಅಭಿವೃದ್ಧಿ ಕೆಲಸಗಳನ್ನೂ ಮುಂದುವರೆಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ನಡೆದ ಪಕ್ಷ. ಅಧಿಕಾರ ಇದ್ದಾಗ ಕೆಲಸ ಮಾಡದೆ ಈ ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿಗೆ ನಿಮ್ಮ ಮತ ಪಡೆಯುವ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದವರಿಗೆ ನಿಮ್ಮ ಮತ ಕೊಡಬೇಡಿ ಎಂದರು.
ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಪಪ್ರಚಾರ ನಡುವೆಯೂ ಗೆದ್ದಿದ್ದು ಕಾಂಗ್ರೆಸ್ ಪಕ್ಷವೇ. ಈ ಚುನಾವಣೆಯಲ್ಲೂ ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಜೊತೆಗೆ 2028ಕ್ಕೂ ನಾವೇ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸೋಲುವ ಭಯದಿಂದ ಬಿಜೆಪಿಯತ್ನಾಳ್ರನ್ನು ಕರೆಸಿದೆ: ಸಿದ್ದು
=========================================== ಇನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ. ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ’ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾಗಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಹೇಳಿದರು.
ಎರಡೂ ಕಡೆ ಗೆಲುವು ನಮ್ಮದೇ:
ರಾಜ್ಯದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು.