ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಸಾಹುಕಾರ್ ಚಿಕ್ಕಣ್ಣಗೌಡ ಸಮುದಾಯ ಭವನದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಆಯೋಜಿಸಿದ್ದ ಶೈಕ್ಷಣಿಕ ಸಮಾವೇಶ, ಪ್ರತಿಭಾ ಪುರಸ್ಕಾರ, ವಯೋನಿವೃತ್ತಿ ಹೊಂದಿದವರಿಗೆ ಬೀಳ್ಕೊಡುಗೆ ಮತ್ತು ಶೇ.100 ರಷ್ಟು ಫಲಿತಾಂಶ ಪಡೆದ ಕಾಲೇಜಿನ ಉಪನ್ಯಾಸಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞೆ ಮಾನವೀಯ ಗುಣಗಳು ಕುಸಿತವಾಗುತ್ತಿದೆ. ಅಂಕಗಳಿಕೆ ಮಾನದಂಡದ ಅಡಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡದಿದ್ದರೆ ಉತ್ತಮ ಪ್ರಜೆ ಸೃಷ್ಟಿಸಲು ಸಾಧ್ಯವಿಲ್ಲ ಎಂದರು.ವಿಧಾನ ಪರಿಷತ್ತಿನ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಪಿಯು ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮಹತ್ವರ ಘಟ್ಟವಾಗಿದೆ. ಮಕ್ಕಳಿಗೆ ಭವಿಷ್ಯ ರೂಪಿಸಲು ಉಪನ್ಯಾಸಕರ ಪಾತ್ರ ಹಿರಿದಾಗಿದೆ. ಆದರೆ, ಪಿಯು ಶಿಕ್ಷಣ ತ್ರಿಶಂಕು ಸ್ಥಿತಿ ತಲುಪುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಾಸಕ ಎಚ್.ಟಿ.ಮಂಜು ಮಾತನಾಡಿ, ತಾಲೂಕಿನರುವ ಸರ್ಕಾರಿ ಪಿಯು ಕಾಲೇಜಿನ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಉಪನ್ಯಾಸಕರ ಸಮಸ್ಯೆ ನಿವಾರಣೆಗಾಗಿ ಸದನದಲ್ಲಿ ಪ್ರಸ್ತಾಪ ಮಾಡಿ ಇಲ್ಲಿನ ಪಿಯು ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದರು.
ಈ ವೇಳೆ ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಎಲ್.ಮಂಜುನಾಥ್, ಬಿಇಒ ಆರ್.ಎಸ್.ಸೀತಾರಾಮು, ಬಡ್ತಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಮೇಶ್, ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕ ಎಸ್.ಎಲ್. ಮೋಹನ್, ಜಿಲ್ಲಾ ಪಿಯು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಭೈರೇಶ್, ಪ್ರಾಂಶುಪಾಲರಾದ ಡಿ.ಬಿ.ಸತ್ಯ, ಕೆ.ಮೋಹನ್, ಲಿಂಗರಾಜು, ಜಿಲ್ಲಾ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಚನ್ನಕೃಷ್ಣಯ್ಯ, ಜಿಲ್ಲಾ ಕೋಶಾಧ್ಯಕ್ಷೆ ಬಿ.ಎಸ್.ಲತಾ, ಡಿಡಿಪಿಯು ಕಚೇರಿ ಶಾಖಾಧಿಕಾರಿ ರಾಜೇಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವರಾಮೇಗೌಡ, ಉಪಾಧ್ಯಕ್ಷ ಎಸ್.ಡಿ. ಹರೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪದ್ಮೇಶ್, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜು, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ರಾಮಕೃಷ್ಣೇಗೌಡ ಸೇರಿದಂತೆ ಹಲವರು ಇದ್ದರು.