ವಿಷ ಬೀಜ ಬಿತ್ತಿ ಮತ ಕೇಳುವವರು ನಾವಲ್ಲ

KannadaprabhaNewsNetwork |  
Published : Sep 10, 2025, 01:03 AM IST
ಪೋಟೋ ಫೈಲ್‌ ನೇಮ್‌ 9 ಕೆಸಿಕೆಎಂ 3ಚಿಕ್ಕಮಗಳೂರು ತಾಲೂಕಿನ ಮೇದರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಚ್‌.ಡಿ.ತಮ್ಮಯ್ಯ ಅವರು  ಮೇದರಹಳ್ಳಿ ಮತ್ತು ವಡೇರಹಳ್ಳಿ ಗ್ರಾಮಗಳ ನಿವಾಸಿಗಳಿಗೆ ಹಕ್ಕು ಪತ್ರ ಮತ್ತು ಇ-ಸ್ವತ್ತು ವಿತರಿಸಿದರು. | Kannada Prabha

ಸಾರಾಂಶ

ಧರ್ಮ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಮತ ಕೇಳುವವರು ನಾವಲ್ಲ, ಜನರ ಬದುಕು, ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಮತ ಕೇಳುತ್ತೇವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು: ಧರ್ಮ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಮತ ಕೇಳುವವರು ನಾವಲ್ಲ, ಜನರ ಬದುಕು, ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಮತ ಕೇಳುತ್ತೇವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ತಾಲೂಕಿನ ಮೇದರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಈಶ್ವರಹಳ್ಳಿ ಗ್ರಾಮದಿಂದ ನೂತನವಾಗಿ ಕಂದಾಯ ಗ್ರಾಮವನ್ನಾಗಿ ರಚಿಸಿರುವ ಮೇದರಹಳ್ಳಿ ಮತ್ತು ವಡೇರಹಳ್ಳಿ ಗ್ರಾಮಗಳ ನಿವಾಸಿಗಳಿಗೆ ಹಕ್ಕು ಪತ್ರ ಮತ್ತು ಇ-ಸ್ವತ್ತು ವಿತರಿಸಿ ಅವರು ಮಾತನಾಡಿದರು.

ಒಳ್ಳೆಯ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಬದುಕು ನೀಡುವುದನ್ನು ಗುರಿಯಾಗಿಸಿಕೊಂಡ ರಾಜ್ಯ ಸರ್ಕಾರ, ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಜನಪರ ಆಡಳಿತ ನಡೆಸುವ ಮೂಲಕ ಜನಪ್ರತಿನಿಧಿಗಳ ಕರ್ತವ್ಯವನ್ನು ನೆನಪಿಸಿದೆ ಎಂದರು.

ತಮ್ಮ ಅಧಿಕಾರವಧಿಯಲ್ಲಿ ಕಾನೂನು ಬಾಹಿರ ಕೆಲಸವನ್ನು ಮಾಡುವುದಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಬಡ ಜನರ ಪರವಾದ ಕೆಲಸ ಮಾಡುವುದಾಗಿ ಭರವಸೆ ನೀಡಿದರಲ್ಲದೆ, ಎತ್ತಿನ ಹೊಳೆ ಯೋಜನೆಯಿಂದಾಗಿ ಕ್ಷೇತ್ರದ ಬೆಳವಾಡಿ, ದೇವನೂರು ಕೆರೆಗಳು ಭರ್ತಿಯಾಗಿವೆ ಎಂದು ತಿಳಿಸಿದರು.ಜನಪರವಾದ ಕೆಲಸಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಸಹಿಸದ ಕೆಲವರು ಹೊಟ್ಟೆ ಕಿಚ್ಚು ಪಟ್ಟು ಕೊಳ್ಳುತ್ತಿದ್ದಾರೆ. ಇದಕ್ಕೆ ಔಷಧಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದ ಅವರು, ಅಂತಹವರಿಗೆ ಒಳ್ಳೆಯ ಬುದ್ಧಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕುಪತ್ರ ಕೊಡುವಾಗ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ನೀಡಿ ಜನಪರವಾದ ಇಂತಹ ಕಾರ್ಯಕ್ರಮಗಳಿಗೆ ಯಾವುದೇ ಪಕ್ಷದಿಂದ ಚುನಾಯಿತರಾಗಿದ್ದರೂ ಅಂತಹವರನ್ನು ಆಹ್ವಾನಿಸಿ ಎಂದು ಸಲಹೆ ನೀಡಿದರು.ಇನ್ನೂ 3 ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದ ಅವರು, ಹಿರೇಮಗಳೂರಿನಲ್ಲಿ ನಾನು ವ್ಯಾಸಂಗ ಮಾಡಿದ ಶಾಲೆಗೆ 1.50 ಕೋಟಿ ರು. ವೆಚ್ಚದಲ್ಲಿ ಉತ್ತಮವಾದ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯ ಜನರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಬೇರೆ ಬೇರೆ ಜಿಲ್ಲೆಗಳ ಆಸ್ಪತ್ರೆಗಳಿಗೆ ಹೋಗುತ್ತಿರುವುದನ್ನು ತಪ್ಪಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಈಗಾಗಲೇ 100 ಕೋಟಿ ರು. ಬಿಡುಗಡೆಯಾಗಿದ್ದು, ಇನ್ನೂ 80 ಕೋಟಿ ರು.ಗಳನ್ನು ಮಂಜೂರು ಮಾಡಿಸಿ ಮುಂದಿನ ಒಂದೂವರೆ ವರ್ಷದಲ್ಲಿ ಸಾರ್ವಜನಿಕರಿಗೆ ಸಮರ್ಪಿಸುವುದಾಗಿ ತಿಳಿಸಿದರು.ವಾಸಿಸುವವನೇ ಮನೆಯ ಒಡೆಯ ಯೋಜನೆಯಡಿ ಬಡವರ ನೇತಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಕ್ಕುಪತ್ರಗಳನ್ನು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದು, ಮೇದರಹಳ್ಳಿಯಲ್ಲಿ ಸುಮಾರು 150 ಕುಟುಂಬಗಳು ಈ ಯೋಜನೆಯಡಿ ನೊಂದಾಯಿಸಿಕೊಂಡಿದ್ದು, ಬಾಕಿ ಇರುವ 40 ಜನರು ನೋಂದಾಯಿಸಿಕೊಂಡರೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರೇಷ್ಮಾ ಶೆಟ್ಟಿ, ತಾಪಂ ಕಾರ್ಯನಿರ್ವಹಕ ಅಧಿಕಾರಿ ವಿಜಯಕುಮಾರ್, ಗ್ರಾ.ಪಂ ಅಧ್ಯಕ್ಷರುಗಳಾದ ಸೈಯದ್‌ ಜಮೀರ್‌, ಅಮೀರ್‌ ಜಾನ್, ಶಂಕರನಾಯ್ಕ, ಮಧು, ಯೋಗೀಶ್, ಕೆಂಗೇಗೌಡ, ಗ್ರಾಪಂ ಸದಸ್ಯರಾದ ನಾಗರಾಜ್, ಶೋಭ ಯೋಗೀಶ್, ಮಧು, ಹರ್ಷದ್ ಉಪಸ್ಥಿತರಿದ್ದರು.

PREV

Recommended Stories

ಅಕ್ಕಿ ಅಕ್ರಮ ಹಗರಣ: ಸತ್ತವರಿಗೂ ಅನ್ನಭಾಗ್ಯ !
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು