ಡಿ.ಕೆ.ಶಿವಕುಮಾರ್ ಜತೆ ಮುನಿಸಿಲ್ಲ, ಒಗ್ಗಟ್ಟಾಗಿದ್ದೇವೆ: ಸಚಿವ ಸತೀಶ ಜಾರಕಿಹೊಳಿ

KannadaprabhaNewsNetwork |  
Published : Jan 26, 2025, 01:34 AM IST
ಸತೀಶ ಜಾರಕಿಹೊಳಿ | Kannada Prabha

ಸಾರಾಂಶ

ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್ ಜತೆಗೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್ ಜತೆಗೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿ.ಕೆ.ಶಿವಕುಮಾರ್ ಜತೆಗೆ ಯಾವುದೇ ಮುನಿಸಿಲ್ಲ‌. ಮೊನ್ನೆ ಎಲ್ಲರೂ ಸೇರಿ ಅತ್ಯಂತ ಯಶಸ್ವಿ ಕಾರ್ಯಕ್ರಮ ಮಾಡಿದ್ದೇವೆ. ಮುನಿಸು ಅನ್ನುವ ಪ್ರಶ್ನೆಯೇ ಬರಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ಪ್ರಶ್ನೆ ಮಾಡಬೇಕು. ಆ ಬಗ್ಗೆ ಹೇಳುವ ಅಧಿಕಾರ ನನಗೆ ಇಲ್ಲ ಎಂದರು‌.

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರಾ ಎಂಬ ಪ್ರಶ್ನೆಗೆ, ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವ ಎಲ್ಲರಿಗೂ ಸ್ವಾಗತ. ಖಾಸಗಿಯಾಗಿ ಶ್ರೀರಾಮುಲು ನನ್ನ ಸಂಪರ್ಕದಲಗಲ್ಲಿದ್ದು, ರಾಜಕೀಯವಾಗಿ ಇಲ್ಲ.‌ ಪಕ್ಷಕ್ಕೆ ಬರುವುದು ಬಿಡುವುದು ಅವರಿಷ್ಟ. ನಾವು ಕರೆದರೆ ಯಾರೂ ಬರಲ್ಲ, ಅವರೇ ಬರಬೇಕಾಗುತ್ತದೆ‌.ಶ್ರೀರಾಮುಲುರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಿನ್ನೆಯೂ ಈ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದರು..

ಶ್ರೀರಾಮುಲುರನ್ನು ಪಕ್ಷಕ್ಕೆ ಕರೆತರಲು ಡಿಕೆಶಿ ಪ್ರಯತ್ನಿಸುತ್ತಿದ್ದಾರಾ ಎಂಬ ಪ್ರಶ್ನೆಗೆ, ಅವನು ಮಾಡಿದರೆ ನಮಗೆ ಗೊತ್ತಿಲ್ಲ. ಬೆಂಗಳೂರಿಗೆ ಹೋದ ಮೇಲೆ ಅದರ ಮಾಹಿತಿ ಪಡೆಯುತ್ತೇನೆ. ನಂತರ ಆ ಬಗ್ಗೆ ಹೆಚ್ಚಿಗೆ ಹೇಳುವಂತಹ ಪ್ರಯತ್ನ ಮಾಡುತ್ತೇನೆ ಎಂದಷ್ಟೇ ಹೇಳಿದರು.

2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಮುಖ್ಯಮಂತ್ರಿ ಹುದ್ದೆಗೆ ಕ್ಲೇಮ್ ಮಾಡ್ತೀನಿ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವುದು ಎಲ್ಲರ ಜವಾಬ್ದಾರಿ. ನಾನು 2028ಕ್ಕೆ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಆಗ್ತೀವಿ ಎಂದು ಹೇಳಿಲ್ಲ.‌ ಸಿಎಂ ಮಾಡೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದ್ದೇ ಇದೆ. ಅದರಲ್ಲಿ ನಾನೂ ಪಾಲುದಾರ, ಭಾಗಿದಾರ ಅಷ್ಟೇ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ