ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತ ಇಲ್ಲ, ಬೆಳಗಾವಿ ಜಿಲ್ಲೆ ವಿಭಜನೆಗೆ ಇದೆ

KannadaprabhaNewsNetwork |  
Published : Nov 26, 2026, 03:00 AM IST
25ಕೆಜಿಎಲ್ 10ಕೊಳ್ಳೇಗಾಲದ ಗುರುಭವನದಲ್ಲಿ 90 ಫಲಾನುಭವಿಗಳಿಗೆ  ಸ್ವಯಂ ಉದ್ಯೋಗದ ಮೂಲಕ ಆರ್ಧಿಕ ಸಬಲಿಕರಣಕ್ಕಾಗಿ ಕೋಳಿ ಮರಿಗಳನ್ನು ಶಾಸಕ ಎ. ಆರ್. ಕೃಷ್ಣಮೂರ್ತಿ ಅವರು ವಿತರಿಸಿದರು. ತೋಟೇಶ್, ರಾಜೇಂದ್ರ, ಸಿದ್ದರಾಜು ಇನ್ನಿತರಿದ್ದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಗೆ ಸಚಿವ ಸತೀಶ ಜಾರಕಿಹೊಳಿ ಪರೋಕ್ಷ ತಿರುಗೇಟು ನೀಡಿದ್ದು, ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತ ಇಲ್ಲ. ಅಖಂಡ ಕರ್ನಾಟಕ ಉಳಿಯಬೇಕು ಎಂಬುದೇ ನಮ್ಮ ಆಶಯ ಎಂದು ಸ್ಪಷ್ಟಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಗೆ ಸಚಿವ ಸತೀಶ ಜಾರಕಿಹೊಳಿ ಪರೋಕ್ಷ ತಿರುಗೇಟು ನೀಡಿದ್ದು, ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತ ಇಲ್ಲ. ಅಖಂಡ ಕರ್ನಾಟಕ ಉಳಿಯಬೇಕು ಎಂಬುದೇ ನಮ್ಮ ಆಶಯ ಎಂದು ಸ್ಪಷ್ಟಪಡಿಸಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆಗಳನ್ನು ರಚಿಸುವುದಕ್ಕೆ ನಮ್ಮ ಸಹಮತವಿದೆ. ಜಿಲ್ಲೆ ವಿಭಜನೆಗೆ ಯಾವುದೇ ಅಪಸ್ವರವಿಲ್ಲ. ಆದರೆ, ಪ್ರತ್ಯೇಕ ರಾಜ್ಯ ರಚನೆಯ ವಿಚಾರದಲ್ಲಿ ನಮ್ಮ ನಿಲುವು ಬೇರೆಯಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಜಿಲ್ಲೆ ವಿಭಜನೆ ವಿಚಾರದಲ್ಲಿ ಮುಂದೇನಾಗಲಿದೆ ಎಂಬುದನ್ನು ಕಾದು ನೋಡೋಣ ಎಂದರು.

ಸಚಿವ ಲಕ್ಷ್ಮಣ ಸವದಿ ಹಾಗೂ ತಮ್ಮ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರಿಬ್ಬರ ವೈಯಕ್ತಿಕ ಜಗಳ. ಅವರಿಬ್ಬರ ನಡುವಿನ ಸಮಸ್ಯೆ ರಾಜ್ಯದ ಅಥವಾ ದೇಶದ ಸಮಸ್ಯೆಯಲ್ಲ. ಅವರವರೇ ಪರಸ್ಪರ ಟೀಕಿಸಿಕೊಂಡಿದ್ದಾರೆ. ಅದು ಅಲ್ಲಿಗೆ ಸಮವಾಗಿದೆ. ಇಬ್ಬರೂ ಕುಳಿತುಕೊಂಡು ತಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5394 ಕೋಟೀಲಿ 2875 ಕಿಮೀ ರಸ್ತೆ ಅಭಿವೃದ್ಧಿ: ಕೃಷ್ಣ
ಭದ್ರಾ ಡ್ಯಾಂ ಬಲ, ಎಡದಂಡೆ ನಾಲೆಗಳಿಗೆ ನೀರು ಹರಿಸಿ