ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಬಿಜಿಎಸ್ ಶಾಲಾ ಆವರಣದಲ್ಲಿ ನೂತನ ಶ್ರೀಆದಿಚುಂಚನಗಿರಿ ಬಾಲಜಗತ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಗಣಪತಿ ದೇವಾಲಯದ ಕಟ್ಟಡ ಲೋಕಾರ್ಪಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರ ನಡವಳಿಕೆಯನ್ನು ಸಾರ್ವಜನಿಕವಾಗಿ ನಾನೇ ಒಪ್ಪಿಕೊಳ್ಳುತ್ತೇನೆ. ಆದರೆ, ರಮೇಶ್ ಬಂಡಿಸಿದ್ದೇಗೌಡರು ಸ್ವಾಮೀಜಿ ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಸ್ವಾಮೀಜಿ ಅವರನ್ನೇ ಪ್ರಶ್ನಿಸುವ ಹಂತಕ್ಕೆ ನಾವೆಲ್ಲ ಬೆಳೆದಿದ್ದೇವೆ ಎಂದು ವಿಷಾದಿಸಿದರು.
ರಾಜ್ಯ ರಾಜಕಾರಣ ವಿಷಯವಾಗಿ ನಮ್ಮ ಸಮಾಜದವರು ಮುಖ್ಯಮಂತ್ರಿ ಆಗಬೇಕು ಎಂಬ ನಿರ್ಮಲಾನಂದನಾಥ ಸ್ವಾಮೀಜಿಗಳ ಹೇಳಿಕೆಗೆ ಬೇರೆ ಸಮಾಜದ ಸ್ವಾಮೀಜಿಗಳು ಲಘುವಾಗಿ ಮಾತನಾಡಿದ್ದರು. ಆ ವೇಳೆ ನಾನು ಸಹ ನೀವು ನಿಮ್ಮ ವ್ಯಕ್ತಿತ್ವ ಬಹಳ ಎತ್ತರಕ್ಕೆ ಬೆಳೆದಿದೆ ತಾವು ರಾಜಕೀಯವಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ಹೇಳಿದ್ದೆ ಎಂದರು.ಈ ವಿಷಯವಾಗಿ ಮಾಜಿ ಪ್ರಧಾನಿ ದೇವೇಗೌಡರು ನನಗೆ ಬುದ್ಧಿ ಮಾತುಗಳನ್ನು ಹೇಳಿ ಸ್ವಾಮೀಜಿಗಳು ಹೆಚ್ಚಾಗಿ ಓದಿಕೊಂಡಿದ್ದು, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮೊದಲು ಸ್ವಾಮೀಜಿ ಅವರ ಬಳಿ ಕ್ಷಮೆ ಕೋರುವಂತೆ ಹೇಳಿದ್ದರು. ಸಾರ್ವಜನಿಕವಾಗಿ ನಾನು ಕ್ಷಮೆ ಕೋರಿದ್ದೇನೆ ಎಂದು ಸ್ಮರಿಸಿದರು.
ಇದಕ್ಕೂ ಮುನ್ನ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿ ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ. ಮಠದ ಹಿರಿಯ ಸ್ವಾಮೀಜಿ ಬಾಲಗಂಗಾಧರನಾಥ ಸ್ವಾಮೀಜಿ ಅವರು ಎಲ್ಲರನ್ನೂ ಒಗ್ಗೂಡಿಸಿ ಜೊತೆಗೆ ಕರೆದುಕೊಂಡು ಹೋಗುವಂತೆ ಒಳ್ಳೆಯ ದಾರಿ ಹಾಕಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟಿರುವಂತಹ ಹಾದಿ ತಪ್ಪಬಾರದು ಎಂಬ ಉದ್ದೇಶದಿಂದ ಹೇಳಿದ್ದೇನೆ ಎಂದರು.
ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಪ್ರಸ್ತುತ ಎಐ ತಂತ್ರಜ್ಞಾನ ವಿಶ್ವಪ್ಯಾಪಿ ಹರಡುತ್ತಿದೆ. ಇದಕ್ಕೆ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ವಿದ್ಯಾಭ್ಯಾದಲ್ಲಿ ಮುಂದೆ ಬರಬೇಕು. ಎಐ ಹಾಗೂ ರೋಬೋಟಿಕ್ ಬಳಸಿಕೊಂಡು ಸಾವಿರ ಜನ ನಿರ್ವಹಿಸುವ ಕಾರ್ಯಕವನ್ನು ಒಬ್ಬ ಮನುಷ್ಯ ರೊಬೋಟಿಕ್‌ನಿಂದ ಕೆಲಸ ಪಡೆಯುತ್ತಿದ್ದಾರೆ ಎಂದರು.
ಈ ವೇಳೆ ಮೈಸೂರು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಶ್ರೀ ಸೋಮೇಶ್ವರನಾಥಸ್ವಾಮಿಜಿ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು, ಬಿಜೆಪಿ ಮುಖಂಡ ಸಚ್ಚಿದಾನಂದ, ವಕೀಲ ಪುಟ್ಟೇಗೌಡ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಚೇತನಾ ಯಾದವ್ ಸೇರಿದಂತೆ ಇತರರು ಇದ್ದರು.