ತುಂಗಾ ಮೇಲ್ದಂಡೆ ಯೋಜನೆ ಜಾರಿ ಮಾಡಿದ್ದೇವೆ-ಬೊಮ್ಮಾಯಿ

KannadaprabhaNewsNetwork |  
Published : May 03, 2024, 01:11 AM IST
ಫೋಟೊ ಶೀರ್ಷಿಕೆ: 2ಆರ್‌ಎನ್‌ಆರ್5ರಾಣಿಬೆನ್ನೂರು ತಾಲೂಕಿನ ಬ್ಯಾಡಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ರೋಡ್ ಶೋ ಮೂಲಕ ಮತ ಯಾಚನೆ ಮಾಡಿದರು.  | Kannada Prabha

ಸಾರಾಂಶ

ತುಂಗಾ ಮೇಲ್ದಂಡೆ ಯೋಜನೆ ಮೂಲಕ ಹಾವೇರಿ ಜಿಲ್ಲೆಗೆ ನೀರು ತರುವುದು ಅಸಾಧ್ಯವಾಗಿದ್ದನ್ನು ಸಾಧ್ಯ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಣಿಬೆನ್ನೂರು: ತುಂಗಾ ಮೇಲ್ದಂಡೆ ಯೋಜನೆ ಮೂಲಕ ಹಾವೇರಿ ಜಿಲ್ಲೆಗೆ ನೀರು ತರುವುದು ಅಸಾಧ್ಯವಾಗಿದ್ದನ್ನು ಸಾಧ್ಯ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಬ್ಯಾಡಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹನುಮಾಪುರ, ಹೊನ್ನತ್ತಿ, ಗುಡ್ಡದ ಅನವೇರಿ, ಗುಡ್ಡದ ಗುಡ್ಡಾಪುರ, ಕಜ್ಜರಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು. ತುಂಗಾ ಮೇಲ್ದಂಡೆ ಯೋಜನೆ ಮೂಲಕ ರಾಣಿಬೆನ್ನೂರಿಗೆ ನೀರು ತರುವ ಯೋಜನೆಯನ್ನು 2008ರಲ್ಲಿ ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಸಭೆ ಮಾಡಿ 2011ರಲ್ಲಿ ಯೋಜನೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದೆನು. ಆದರೆ ಅದು ಅಸಾಧ್ಯವೆಂದು ಕೆಲವರು ಹೇಳಿದ್ದರು. ನಾಲ್ಕು ಬಾರಿ ಟೆಂಡರ್ ಕರೆದರೂ ಯಾರೂ ಬರಲಿಲ್ಲ. ಕಡೆಗೆ ನನ್ನ ಸ್ನೇಹಿತ ತಂತ್ರಜ್ಞಾನ ಬಳಸಿ 150 ಆಳದಲ್ಲಿ ಕೆನಾಲ್ ಮಾಡಿ ನೀರು ತಂದೆವು ಎಂದು ಹೇಳಿದರು. ಸ್ವಾತಂತ್ರ‍್ಯ ಬಂದ ಮೇಲೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬ್ಯಾಡಗಿ ಕ್ಚೇತ್ರಕ್ಕೆ ಅತಿ ಹೆಚ್ಚು 2000 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಅವರಿಗೆ ಧನ್ಯವಾದ ಹೇಳಬೇಕು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಮನೆಗೆ ನಲ್ಲಿ ನೀರು, ಉಜ್ವಲ ಗ್ಯಾಸ್ ಯೋಜನೆಯಡಿ ಸಿಲಿಂಡರ್ ಕೊಟ್ಟಿದ್ದಾರೆ ಹಾಗೂ ಬಡವರಿಗೆ ಮನೆ ಕಟ್ಟಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಹತ್ತು ಕೆಜಿ ಉಚಿತ ಅಕ್ಕಿ ಕೊಟ್ಟಿದ್ದಾರೆ. ಈಗಲೂ ಐದು ಕೆಜಿ ಅಕ್ಕಿ ನರೇಂದ್ರ ಮೋದಿಯವರೇ ಕೊಡುತ್ತಿದ್ದಾರೆ. ದೇಶದ 130 ಕೋಟಿ ಜನರಿಗೆ ಮೋದಿಯವರು ಉಚಿತ ಲಸಿಕೆ ಕೊಡಿಸಿದ್ದಾರೆ. ಅನ್ನ, ನೀರು ಕೊಟ್ಟು ಜೀವ ಉಳಿಸಿದ ನರೇಂದ್ದ ಮೋದಿಯವರಿಗೆ ಕೃತಜ್ಞತೆ ಹೇಳುವ ಸಮಯ ಬಂದಿದೆ. ಬಿಜೆಪಿಗೆ ಮತ ಹಾಕುವ ಮೂಲಕ ಅವರ ಋಣ ತೀರಿಸಿ ಎಂದರು. ರೋಡ್ ಶೋದಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!