ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಎನ್.ಎಸ್.ಎಸ್. ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಒಂದು ದಿನದ ವಿಚಾರ ಸಂಕಿರಣ ಹಾಗೂ ಪ್ರಾಂಶುಪಾಲರು ಮತ್ತು ಕಾರ್ಯಕ್ರಮಾಧಿಕಾರಿಗಳ ಸಮಾಲೋಚನಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣವು ಪರಿಪೂರ್ಣವಾಗಬೇಕಾದರೆ ಅದು ವ್ಯಕ್ತಿತ್ವದ ಮೌಲ್ಯ, ಸತ್ವಗಳನ್ನು ಅನಾವರಣಗೊಳಿಸುವ ಅವಕಾಶ ನೀಡಬೇಕು ಎಂದರು.ಎನ್.ಎಸ್.ಎಸ್. ಚಟುವಟಿಕೆಗಳ ಮೂಲಕ ಇಂದಿನ ವಿದ್ಯಾರ್ಥಿಗಳು ಕಲಿಯಬೇಕಾದುದು ತುಂಬಾ ಇದೆ. ಶ್ರಮದಾನ ಎನ್ನುವುದು ಕೇವಲ ದೈಹಿಕ ಚಟುವಟಿಕೆಯಲ್ಲ, ಅದರಲ್ಲಿ ವಿಶಾಲ ಅರ್ಥವಿದೆ. ಸ್ವಾವಲಂಬನೆ, ಸ್ವಸಾಮರ್ಥ್ಯ ವೃದ್ಧಿಯ ಕೌಶಲಗಳನ್ನು ಕಲಿಯಲು ಸಾಕಷ್ಟು ಅವಕಾಶಗಳಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೇಶವ ಎಚ್. ಅವರು, ಎನ್.ಎಸ್.ಎಸ್. ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕಿದೆ. ಸೈಬರ್ ಅಪರಾಧಗಳ ಬಗ್ಗೆ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಸಾಮಾನ್ಯ ಜನರನ್ನು ತಲುಪಲು ಸಾಧ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮೌಲ್ಯಮಾಪನ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಕಟಪೂರ್ವ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಅವರನ್ನು ಅಭಿನಂದಿಸಲಾಯಿತು.
ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಮತ್ತು ಪ್ರೊ. ಅವಿನಾಶ್ ಟಿ. ಪ್ರತಿಕ್ರಿಯೆ ನೀಡಿದರು. ಕಾರ್ಯಕ್ರಮಾಧಿಕಾರಿಗಳ ಪರವಾಗಿ ಎಂ.ಜಿ. ನಾಗರಾಜ ಹಾಗೂ ಡಾ. ಎ.ಜಿ. ಪ್ರಶಾಂತ ಮಾತನಾಡಿದರು.