ಕನ್ನಡಪ್ರಭ ವಾರ್ತೆ ಕೊಪ್ಪಳ
ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 76ನೇ ಗಣರಾಜೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವು ಮಾಡುವ ಕೆಲಸ ನಮ್ಮ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಇರಬೇಕು ಮತ್ತು ಅಂತಹ ಯೋಜನೆ ರೂಪಿಸಬೇಕು. ಮುಂದಿನ 5 ವರ್ಷದ ಕೃಷಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಭಿವೃದ್ಧಿ ಯೋಜನೆ ಜಿಲ್ಲೆಯಲ್ಲಿ ಮಾಡಿದ್ದೇವೆ. ಪ್ರವಾಸೋದ್ಯಮ 5 ವರ್ಷದ ಬ್ರ್ಯಾಂಡ್ ಮಾಡಿ ನಮ್ಮ ಜಿಲ್ಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕಿದೆ. ಇದಕ್ಕೆ ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯಿಂದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿವೆ. ನಮ್ಮ ಜಿಲ್ಲೆಯ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪನವನ ಸಲ್ಲಿಕೆ:ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಡಿಸಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದು, ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.