ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಉತ್ತಮ ಸಾಧನೆ ಮಾಡಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Apr 16, 2026, 02:00 AM IST
ಸಾಂಸ್ಕೃತಿಕ, ಕ್ರೀಡಾ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭ | Kannada Prabha

ಸಾರಾಂಶ

ತರೀಕೆರೆ ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಸಾಂಸ್ಕೃತಿಕ, ಕ್ರೀಡಾ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಹಲವು ಸೌಕರ್ಯಗಳಿಗೆ ಒಟ್ಟು ₹6.75 ಕೋಟಿ ಅನುದಾನ ಒದಗಿಸಲಾಗಿದ್ದು, ಇದರಿಂದ ಕಾಲೇಜು ಅತ್ಯಾಧುನಿಕ ಸೌಲಭ್ಯ ಹೊಂದಿದೆ. ಕಾಲೇಜಿನ ಅಭಿವೃದ್ಧಿ ಪರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಡೋಜ ಕುಂ.ವೀರಭದ್ರಪ್ಪ ಮಾತನಾಡಿ, ಎಐ ತಂತ್ರಾಂಶ ಮನುಷ್ಯರ ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ. ಅದನ್ನು ಅಗತ್ಯಕ್ಕಿಂತ ಹೆಚ್ಚು ಬಳಸಬಾರದು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕೊಲಂಬಿಯಾ ವಿಶ್ವ ವಿದ್ಯಾಲಯದಲ್ಲಿ ಅಪಾರ ಪುಸ್ತಕ ಓದಿ, 14 ಪಿಎಚ್‌ಡಿ, 22 ಡಿಗ್ರಿಗಳನ್ನು ಪಡೆದುಕೊಂಡಿದ್ದು, ದಲಿತರಿಗೆ ಮಾತ್ರ ಸೀಮಿತವಾಗದೆ ಭಾರತೀಯರೆಲ್ಲರ ಸಮಗ್ರ ಏಳಿಗೆಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.ಪ್ರಾಂಶುಪಾಲ ಡಾ.ಟಿ.ಮಂಜುನಾಥ್ ಮಾತನಾಡಿ, ಶಾಸಕ ಜಿ.ಎಚ್.ಶ್ರೀನಿವಾಸ್ ಕಾಳಜಿಯಿಂದ ಕಾಲೇಜಿಗೆ ಎಲ್ಲಾ ಸೌಲಭ್ಯಗಳು ದೊರೆತಿವೆ ಎಂದರು.ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ಎಚ್.ಎಸ್.ಶಿವರುದ್ರಪ್ಪ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. ಈ ಸಂದರ್ಭದಲ್ಲಿ ಎಂ.ದತ್ತಾತ್ರೇಯ, ಕರವೇ ಜಿಲ್ಲಾಧ್ಯಕ್ಷ ರಮೇಶ್, ಉಪನ್ಯಾಸಕರು ಹಾಗೂ ಸಿಬ್ಬಂದಿ ಹಾಜರಿದ್ದರು.

-

14ಕೆಟಿಆರ್.ಕೆ.04ಃ_ ತರೀಕೆರೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2024-26ನೇಸಾಲಿನ ಸಾಂಸ್ಕೃತಿಕ, ಕ್ರೀಡಾ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಬಿಡುಗಡೆಗೊಳಿಸಿದರು. ಪ್ರಾಂಶುಪಾಲ ಡಾ.ಟಿ.ಮಂಜುನಾಥ್ ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಂಬಾಚಾರಕ್ಕೆ ಮತ್ತೊಂದು ಹೆಸರೇ ವಚನಾನಂದ ಸ್ವಾಮೀಜಿ: ಮಹೇಶ ಹಾವೇರಿ
ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ