ಜನಸಂಖ್ಯಾ ಸ್ಫೋಟದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಬೇಕು-ಡಾ. ಜಯಾನಂದ

KannadaprabhaNewsNetwork |  
Published : Jul 12, 2024, 01:30 AM IST
೧೧ಎಚ್‌ವಿಆರ್೩, ೩ಎ | Kannada Prabha

ಸಾರಾಂಶ

ಜನಸಂಖ್ಯೆ ಸ್ಫೋಟದಿಂದ ಆಹಾರ, ವಸತಿ, ಶಿಕ್ಷಣ, ನೀರು ಹಾಗೂ ಆರೋಗ್ಯ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಯುವ ಸಮೂಹ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ ಹೇಳಿದರು.

ಹಾವೇರಿ: ಜನಸಂಖ್ಯೆ ಸ್ಫೋಟದಿಂದ ಆಹಾರ, ವಸತಿ, ಶಿಕ್ಷಣ, ನೀರು ಹಾಗೂ ಆರೋಗ್ಯ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಯುವ ಸಮೂಹ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ ಹೇಳಿದರು.ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಿವಾಹದ ನಂತರ ಕುಟುಂಬ ಕಲ್ಯಾಣ ಯೋಜನೆಯ ತಾತ್ಕಾಲಿಕ ವಿಧಾನಗಳನ್ನು ಹಾಗೂ ಶಾಶ್ವತ ವಿಧಾನಗಳನ್ನು ಅನುಸರಿಸಬೇಕು. ಅಭಿವೃದ್ಧಿ ದೇಶ ಕಟ್ಟಲು ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗುವುದು ಅಗತ್ಯವಾಗಿದೆ ಎಂದು ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ರಾಜು ಕೆಂಬಾವಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಮೆಹಬೂಬ ನಾಯ್ಕೊಡಿ ಅವರು ಜನಸಂಖ್ಯಾ ಸ್ಫೋಟದ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಂಶುಪಾಲ ಡಾ. ಡಿ.ಟಿ. ಪಾಟೀಲ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.ಬಹುಮಾನ ವಿತರಣೆ: ಜನಸಂಖ್ಯೆ ಸ್ಫೋಟದಿಂದಾಗುವ ತೊಂದರೆಗಳ ಬಗ್ಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸೆ ಪತ್ರಗಳನ್ನು ವಿತರಣೆ ಮಾಡಲಾಯಿತು.ಬ್ಯಾಡಗಿ ಎಸ್.ಎಸ್.ಪಿ.ಎನ್ ಪದವಿ ಪೂರ್ವ ಕಾಲೇಜ ವಿದ್ಯಾರ್ಥಿನಿ ಸ್ನೇಹಾ ಎಂ- ಪ್ರಥಮ, ರಾಣಿಬೆನ್ನೂರು ತಾಲೂಕು ಜೋಯಿಸರಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿನಿ ಶಾರದಾ ಬೆನ್ನೂರು-ದ್ವಿತೀಯ ಹಾಗೂ ರಟ್ಟಿಹಳ್ಳಿ ತಾಲೂಕಿನ ಮೇದೂರಿನ ಶ್ರೀ ಗಜಾನನ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನಂದಿನಿ ಖಂಡೆಬಾಗೂರು ತೃತೀಯ ಬಹುಮಾನ ಪಡೆದರು.ಪ್ರಚಾರ ಸಾಮಗ್ರಿ ಬಿಡುಗಡೆ: ಇದೇ ಸಂದರ್ಭದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ, ಅಭಿಯಾನ -೨೦೨೪ರ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನೀಲೇಶ್ ಎಂ.ಎನ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರು, ವೈದ್ಯಾಧಿಕಾರಿ ಡಾ. ಮೊಹಮ್ಮದ ಹಯಾತ್ ದಖನಿ, ಸಿಪಿಐ ಸಂತೋಷ ಪವಾರ ಇತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಲಮಾಣಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ